ಕಾಲೇಜು ಪ್ರಾರಂಭಕ್ಕೆ ಇಂದೇ ದಿನಾಂಕ ಫಿಕ್ಸ್..? college
ಬೆಂಗಳೂರು : ರಾಜ್ಯದಲ್ಲಿ ಕಾಲೇಜು ಪ್ರಾರಂಭಕ್ಕೆ ಇಂದೇ ದಿನಾಂಕ ಫಿಕ್ಸ್ ಆಗುವ ಸಾಧ್ಯತೆಗಳಿವೆ.
ಜುಲೈ ಮೂರನೇ ವಾರದಲ್ಲಿ ಪದವಿ ಕಾಲೇಜು ಪ್ರಾರಂಭಿಸುವ ಬಗ್ಗೆ ಇಂದು ಉನ್ನತ ಮಟ್ಟದ ಚರ್ಚೆಗಳು ನಡೆಯಲಿವೆ.
ಸದ್ಯ ಈಗ ಅನ್ ಲೈನ್ ತರಗತಿಗಳು ನಡೆಯುತ್ತಿದ್ದು, ವ್ಯಾಕ್ಸಿನ್ ಮುಗಿದ ಕೂಡಲೇ ಕಾಲೇಜು ಪ್ರಾರಂಭಿಸಲು ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಈ ವಿಚಾರವಾಗಿ ಇಂದು ಉನ್ನತ ಶಿಕ್ಷಣ ಸಚಿವ, ಡಿಸಿಎಂ ಅಶ್ವಥ್ ನಾರಾಯಣ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಇದರಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಮೂಲಗಳ ಪ್ರಕಾರ ಸದ್ಯ ಶೇಕಡಾ 80 ರಷ್ಟು ವಿದ್ಯಾರ್ಥಿಗಳಿಗೆ ವಾಕ್ಸಿನ್ ಆಗಿದ್ದು, ಈ ತಿಂಗಳ ಮೂರನೇ ವಾರಕ್ಕೆ ಇನ್ನಷ್ಟು ವಿದ್ಯಾರ್ಥಿಗಳು ವ್ಯಾಕ್ಸಿನ್ ಪಡೆದುಕೊಳ್ಳಲಿದ್ದಾರೆ ಎಂದು ಅಂದಾಜಿಸಲಾಗಿದೆ.
ಇದನ್ನ ಗಮನದಲ್ಲಿಟ್ಟುಕೊಂಡು ಜುಲೈ ಮೂರನೇ ವಾರದಲ್ಲಿ ಕಾಲೇಜ್ ಓಪನ್ ಮಾಡುವ ಬಗ್ಗೆ ಮಾತುಕತೆ ನಡೆಯಲಿದೆ.