ಕೊರೊನಾ covid-19 ರಣಕೇಕೆ : ಇವತ್ತು ರಾಜ್ಯದಲ್ಲಿ 40,990 ಕೇಸ್ ಪತ್ತೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 40,990 ಜನರಿಗೆ ಹೊಸದಾಗಿ ಕೊರೊನಾ ಪಾಸಿಟಿವ್ ಬಂದಿದ್ದು, ಸೋಂಕಿತರ ಸಂಖ್ಯೆ 15,64,132 ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 40,990 ಕೇಸ್ ಪತ್ತೆಯಾಗಿದ್ದು, 271 ಮಂದಿ ಮೃತಪಟ್ಟಿದ್ದಾರೆ.ರಾಜ್ಯದಲ್ಲಿನ್ನೂ 1564132 ಸಕ್ರಿಯ ಪ್ರಕರಣಗಳಿವೆ.
ಇನ್ನು ಒಟ್ಟಾರೆ ಸೋಂಕಿತರ ಪೈಕಿ ಇಂದು 18341 ಸೋಂಕಿತರು ಸೇರಿದಂತೆ ಇದುವರೆಗೆ 11,43,250 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 19353 ಜನರಿಗೆ ಪಾಸಿಟಿವ್ ಬಂದಿದೆ. ಇದರಿಂದಾಗಿ ಬೆಂಗಳೂರು ನಗರದಲ್ಲಿ 270993 ಸಕ್ರೀಯ ಪ್ರಕರಣಗಳಿವೆ.