ಪ್ರಾಮಾಣಿಕರನ್ನು ಇಂದಿನ ರಾಜಕೀಯ ಪ್ರೋತ್ಸಾಹಿಸುತ್ತಿಲ್ಲ – ರಮ್ಯಾ
ದಕ್ಷ ಐಎಎಸ್ ಆಫೀಸರ್ ರೋಹಿಣಿ ಸಿಂಧೂರಿ ಅವರನ್ನು ಮೈಸೂರಿನಿಂದ ವರ್ಗಾವಣೆ ಮಾಡಿರುವುದಕ್ಕೆ ನಟಿ ಹಾಗೂ ರಾಜಕಾರಣಿ , ಸ್ಯಾಂಡಲ್ ವುಡ್ ನ ಮೋಹಕ ತಾರೆ ರಮ್ಯಾ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಮತ್ತು ಡಿಸಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ವರ್ಗಾವಣೆಯಲ್ಲಿ ಅಂತ್ಯ ಕಂಡಿದೆ. ಇನ್ಸ್ಟಾಗ್ರಾಂನಲ್ಲಿ ಈ ಕುರಿತಾಗಿ ಮಾತನಾಡಿರೋ ರಮ್ಯಾ ‘ಪ್ರಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳನ್ನು ಇಂದಿನ ರಾಜಕೀಯ ಪ್ರೋತ್ಸಾಹಿಸುವುದಿಲ್ಲ’ ಎಂದಿದ್ದಾರೆ.
‘ಸಿಂಧೂರಿ ಕಾರ್ಯ ವೈಖರಿಯನ್ನು ನಾನು ಅಂದು ಮೆಚ್ಚಿದ್ದೇನೆ, ಈಗಲೂ ಮೆಚ್ಚಿಕೊಳ್ಳುತ್ತೇನೆ. ಆದರೆ ಇಂದಿನ ರಾಜಕೀಯ, ಉತ್ತಮ ಕೆಲಸಗಳನ್ನು, ಪ್ರಮಾಣಿಕ ಅಧಿಕಾರಿಗಳನ್ನು ಪ್ರೋತ್ಸಾಹಿಸುತ್ತಿಲ್ಲ ಹಾಗೂ ಬೆಂಬಲಿಸುತ್ತಿಲ್ಲ’ ಎಂದು ನಿರಾಸೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರೋಹಿಣಿ ಸಿಂಧೂರಿ ಅವರ ಕುರಿತು ‘ಭಾರತ ಸಿಂಧೂರಿ’ ಎಂಬ ಸಿನಿಮಾ ಬರಲಿದೆ ಅನ್ನೋ ಚರ್ಚೆ ಸಿನಿಮಾರಂಗದಲ್ಲಿ ಬಾರೀ ಸೌಂಡ್ ಮಾಡ್ತಿದೆ. ನಾಲ್ವಡಿ ಕೃಷ್ಣರಾಜ್ ಒಡೆಯರ್ ಫಿಲಂಸ್ ಸಂಸ್ಥೆ ಈ ಚಿತ್ರ ನಿರ್ಮಿಸಲು ಚಿಂತನೆ ನಡೆಸಿದ್ದು, ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ ಅವರು ರೋಹಿಣಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.