ಬೆಂಗಳೂರು: ಡ್ರಗ್ಸ್ ಜಾಲದ ನಂಟಿನ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿಗೆ ಇಂದು ಇಡೀ ದಿನ ಸಿಸಿಬಿ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ಕಳೆದ ರಾತ್ರಿ ಮಹಿಳಾ ಸಾಂತ್ವನ ಕೇಂದ್ರದಲ್ಲಿ ರಾಗಿಣಿ ದ್ವಿವೇದಿ ಅವರನ್ನು ಇರಿಸಲಾಗಿತ್ತು. ಅಲ್ಲಿಂದ ಮತ್ತೆ ಸಿಸಿಬಿ ಕಚೇರಿಗೆ ಕರೆತಂದು ಇಡೀ ದಿನ ಡ್ರಿಲ್ಲಿಂಗ್ ನಡೆಯಲಿದೆ.
ದೆಹಲಿಯ ಡ್ರಗ್ ಪೆಡ್ಲರ್ ವೀರೇನ್ ಖನ್ನಾನನ್ನು ಅರೆಸ್ಟ್ ಮಾಡಿರುವುದು ರಾಗಿಣಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ರಾಗಿಣಿ ವೀರೇನ್ ಖನ್ನಾ ಜತೆ ನಿರಂತರ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ. ದೇಶ-ವಿದೇಶಗಳಲ್ಲಿ ದೊಡ್ಡ ದೊಡ್ಡ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ, ಪಾರ್ಟಿಗಳಲ್ಲಿ ಬರುವ ಸ್ಟಾರ್ ನಟ-ನಟಿಯರಿಗೆ ಡ್ರಗ್ಸ್ ನೀಡುತ್ತಿದ್ದ. ಹೀಗಾಗಿ ಈತ ನೀಡುವ ಹೇಳಿಕೆ ನಟಿ ರಾಗಿಣಿಗೆ ಇನ್ನಷ್ಟು ಕಂಟಕ ತಂದೊಡ್ಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಿಸಿಬಿ ಕಚೇರಿಯಲ್ಲಿ ವೀರೇನ್ ಖನ್ನಾ-ರಾಗಿಣಿಯನ್ನು ಮುಖಾಮುಖಿ ಕೂರಿಸಿ ಸಿಸಿಬಿ ಪೊಲೀಸರು ವಿಚಾರಣೆ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರತಿದಿನ ನಟಿ ಡ್ರಗ್ಸ್ ಸೇವಿಸುತ್ತಿದ್ದ ನಟಿ ರಾಗಿಣಿ, ಪಾರ್ಟಿಗಳಿಗೆ ಬಂದವರಿಗೂ ಡ್ರಗ್ಸ್ ನೀಡುತ್ತಿದ್ದಳು ಎಂದು ಮೂಲಗಳು ತಿಳಿಸಿವೆ.
***************************
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.









