01. ರಾಜ್ಯದಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಮುಂದುವರೆದಿದೆ. ಈ ಸಮರಕ್ಕೆ ನೀಲಿ ಶಾಲು ಎಂಟ್ರಿಕೊಟ್ಟಿದೆ. ಚಿಕ್ಕಮಗಳೂರಿನಲ್ಲಿ ಹಿಜಾಬ್ ತೆಗೆಸಬಾರದು ಎಂದು ಆಗ್ರಹಿಸಿ ನೀಲಿ ಶಾಲು ಧರಿಸಿದ ವಿದ್ಯಾರ್ಥೀ ಜೈ ಭೀಮ್ ಘೋಷಣೆ ಕೂಗಿದ್ದಾರೆ. ಇತ್ತ ಹಿಜಾಬ್ – ಕೇಸರಿ ಶಾಲು ವಿವಾದ ಮುಂಬೈ ಕರ್ನಾಟಕಕ್ಕೆ ಕಾಲಿಟ್ಟಿದೆ. ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ, ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದಿದ್ದರು. ಹೀಗಾಗಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. todays top news in kannada
ಹೆಚ್ಚಿನ ಮಾಹಿತಿಗಾಗಿ : Hijab Controversy | ವಿಜಯಪುರದಲ್ಲಿ ಹಿಜಾಬ್ ಸದ್ದು | ಕಾಲೇಜಿಗೆ ರಜೆ
02. ರಾಜ್ಯದಲ್ಲಿ ಹಿಜಾಬ್ ವಿವಾದ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಇಷ್ಟು ದಿನ ಶಾಲೆಗಳಲ್ಲಿ ಮಾತ್ರವಿದ್ದ ವಸ್ತ್ರಸಂಹಿತೆಯನ್ನು ಪದವಿಪೂರ್ವ ಕಾಲೇಜುಗಳಿಗೂ ವಿಸ್ತರಿಸಿ ಆದೇಶ ಹೊರಡಿಸಿದೆ.
ಹೆಚ್ಚಿನ ಮಾಹಿತಿಗಾಗಿ : Hijab Controversy: ಹಿಜಾಬ್, ಕೇಸರಿ ಶಾಲು ಮಧ್ಯೆ ನೀಲಿ ಶಾಲು
03. ಗಾಯನ ಲೋಕದ ದಂತಕಥೆ, ಲತಾ ಮಂಗೇಶ್ಕರ್ ಅವರ ಗೌರವಾರ್ಥ ಅಂಚೆ ಚೀಟಿಯನ್ನು ಪರಿಚಯಿಸಲು ಕೇಂದ್ರ ನಿರ್ಧರಿಸಿದೆ ಭಾರತದ ರೈಲ್ವೆ, ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ಈ ಅಂಚೆಚೀಟಿ ‘ನೈಟಿಂಗೇಲ್ ಆಫ್ ಇಂಡಿಯಾ’ಗೆ ಸೂಕ್ತ ಗೌರವವಾಗಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ :ಲತಾ ಮಂಗೇಶ್ಕರ್ ಅವರ ಗೌರವಾರ್ಥ ಅಂಚೆ ಚೀಟಿ ತರಲಿದೆ ಕೇಂದ್ರ..
04. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 83,876 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 11,08,938 ಲಕ್ಷ ಇದೆ. ಕಳೆದ 24 ಗಂಟೆಯಲ್ಲಿ 1,99,054 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. 895 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ : National: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1 ಲಕ್ಷಕ್ಕಿಂತ ಕಡಿಮೆ ಕರೊನಾ ಪ್ರಕರಣಗಳು ಪತ್ತೆ
05. ಕೆಪಿಟಿಸಿಎಲ್ ಇಲಾಖೆಯ ವಿವಿಧ ಹುದ್ದೆಗಳ ನೇಮಕಕ್ಕೆ ಇನ್ಮುಂದೆ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಕಡ್ಡಾಯ ಎಂದು ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಅಪ್ಟಿಟ್ಯಾಡ್ ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಕನ್ನಡ ಪರೀಕ್ಷೆ ಬರೆಯಬೇಕು ಎಂದು ಆದೇಶಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ : Karnataka: ಕೆಪಿಟಿಸಿಎಲ್ ನೇಮಕಕ್ಕೆ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಕಡ್ಡಾಯ: ವಿ. ಸುನಿಲ್ ಕುಮಾರ್
06. ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್‌ನಿಂದ ‘ಸ್ಪುಟ್ನಿಕ್ ಲೈಟ್’ ಲಸಿಕೆ ಬಳಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರೊಂದಿಗೆ ಈಗ ದೇಶದಲ್ಲಿ ಒಟ್ಟು 9 ಕೊರೊನಾ ಲಸಿಕೆಗಳನ್ನು ಬಳಸಲಾಗುತ್ತಿದೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ : National: ಕೊರೊನಾ ವಿರುದ್ಧ ಹೋರಾಡಲು ಸ್ಪುಟ್ನಿಕ್ ಲೈಟ್ ಲಸಿಕೆಯನ್ನು ತುರ್ತು ಬಳಕೆಗೆ ಅನುಮತಿ
07. ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಮತ್ತೆ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೆ ಸೌಮ್ಯ ಲಕ್ಷಣಗಳೊಂದಿಗೆ ಕೋವಿಡ್ 19 ಸೋಂಕಿಗೆ ಒಳಗಾಗಿದ್ದರು. ಈಗ ಪುಲ್ ಫಿಟ್ ಆಗಿ ಮುಂದಿನ ಚಿತ್ರಗಳಲ್ಲಿ ಚಿತ್ರೀಕರಣಕ್ಕೆ ತೊಡಗಿಸಿಕೊಂಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ : ಕೋವಿಡ್ ನಿಂದ ಚೇತರಿಸಿಕೊಂಡ ಮೆಗಾಸ್ಟಾರ್ – ಚಿತ್ರಿಕರಣದಲ್ಲಿ ಭಾಗಿ…
08. ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮತ್ತೆ ಕನ್ನಡಕ್ಕೆ ಕಂಬ್ಯಾಕ್ ಮಾಡಿದ್ದಾರೆ. ನಿರ್ಮಾಪಕ ಸಂದೇಶ ನಾಗರಾಜ್ ಅವರ ಜೊತೆ ಸೇರಿ ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ.
ಹೆಚ್ಚಿನ ಮಾಹಿತಿಗಾಗಿ : ಕನ್ನಡಕ್ಕೆ ಮರಳಿದ ಪ್ರಭುದೇವ – ನಿರ್ಮಾಪಕ ಸಂದೇಶ ನಾಗರಾಜ್ ಜೊತೆ ಸಿನಿಮಾ
09. CVC ಕ್ಯಾಪಿಟಲ್ ತಮ್ಮ ತಂಡದ ಹೆಸರನ್ನು “ಅಹಮದಾಬಾದ್ ಟೈಟಾನ್ಸ್” ಎಂದು ಘೋಷಿಸಿದೆ. ಮೆಗಾ ಹರಾಜಿಗೆ ಕೇವಲ ಐದು ದಿನಗಳು ಬಾಕಿ ಇರುವಾಗ ಸಿವಿಸಿ ಕಂಪನಿ ತರಾತುರಿಯಲ್ಲಿ ತಂಡಕ್ಕೆ ನಾಮಕರಣ ಮಾಡಿದೆ.
ಹೆಚ್ಚಿನ ಮಾಹಿತಿಗಾಗಿ : IPL2022 | ಅಹ್ಮದಾಬಾದ್ “ಟೈಟಾನ್ಸ್” ಆಗಿ ಎಂಟ್ರಿ..!?
10. ಆಟಗಾರರು, ಆಯ್ಕೆಗಾರರು ಬರುತ್ತಾರೆ, ಹೋಗುತ್ತಾರೆ. ಆದ್ರೆ ನಾಯಕ ಯಾವಾಗಲೂ ನಾಯಕನಾಗಿಯೇ ಉಳಿಯುತ್ತಾನೆ ಎಂದು ವಿರಾಟ್ ಕೊಹ್ಲಿ ಅವರನ್ನು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಜಯ್ ಜಡೇಜಾ ಹೊಗಳಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ :ViratKohli | ನಾಯಕ ಯಾವಾಗಲೂ ನಾಯಕನೇ : ಅಜಯ್ ಜಡೇಜಾ