ಮೈಸೂರು: ಅಕ್ಕನೊಡನೆ ಅಂಬೆಗಾಲು ಇಡುತ್ತ ಆಟವಾಡುತ್ತಿದ್ದ ಒಂದುವರೇ ವರುಷದ ಪುಟ್ಟ ಕಂದಮ್ಮ ತೆರೆದ ನೀರಿನ ಸಂಪಿಗೆ ಬಿದ್ದು ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ತೆಂಕಣಕೊಪ್ಪಲು ಗ್ರಾಮದಲ್ಲಿ ಈ ಅವಘಡ ನಡೆದಿದೆ. ನಟರಾಜ್ ಎಂಬುವರ ಪುತ್ರ ದಯಾನಂದ್ ಮೃತ ಬಾಲಕ. ನಿರ್ಮಾಣ ಹಂತದ ಕಟ್ಟಡದ ಎದುರು ಸಂಪು ತೆರೆದಿತ್ತು.

ಬಾಲಕನ ಜತೆ ಅಕ್ಕ ಆಟವಾಡುತ್ತಿದ್ದಳು. ಈ ವೇಳೆ ಅಕ್ಕ ಮನೆಯ ಒಳಗೆ ಹೋಗಿ ಬರುವಷ್ಟರಲ್ಲಿ ಮಗು ನಾಪತ್ತೆಯಾಗಿತ್ತು. ಗಾಬರಿಗೊಂಡ ಪೋಷಕರು ಹುಡುಕಾಟ ನಡೆಸಿದಾಗ ಸಂಪಿನಲ್ಲಿ ಮಗುವಿನ ಮೃತದೇಹ ಕಂಡು ಬಂದಿದೆ. ಮಗುವನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಬಿಳಿಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








