ಒಲಿಮಿಂಕ್ಸ್ 2020 : ಭಾರತಕ್ಕೆ ಪದಕ ಗೆದ್ದ ಕ್ರೀಡಾಪಟುಗಳಿಗೆ ಪ್ರಧಾನಿಗಳಿಂದ ಸನ್ಮಾನ
ನವದೆಹಲಿ : ಟೋಕಿಯೊ ಒಲಿಂಪಿಕ್ಸ್ 2020ನಲ್ಲಿ ಭಾರತಕ್ಕೆ ಪದಕಗಳನ್ನ ಗೆದ್ದುಕೊಟ್ಟ ಹೆಮ್ಮೆಯ ಕ್ರಿಡಾಪಟುಗಳಿಗೆ ಭಾರತೀಯರು ಅಭಿನಂದನೆಯ ಮಹಾಪೂರವನ್ನೇ ಹರಿಸಿದ್ದಾರೆ.. ಗಣ್ಯರು ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಾಮಾಜಿಕ ಜಾಲತಾಣದ ಮೂಲಕ ಕ್ರೀಡಾಪಟುಗಳಿಗೆ ಶುಭಕೋರಿದ್ದಾರೆ.. ಜಪಾನ್ ನ ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್ 2020ಕ್ಕೆ ಬಾನುವಾರ ಅಧಿಕೃತವಾಗಿ ತೆರೆಬಿದ್ದಿದೆ.
ಈ ಬಾರಿ ಒಲಿಂಪಿಕ್ಸ್ ನಲ್ಲಿ ಭಾರತ ಒಟ್ಟು 7 ಪದಕಗಳನ್ನು ಗೆದ್ದುಕೊಂಡಿದ್ದು, ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪದಕ ಗಳಿಸಿದವರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇಂದು ಸಂಜೆ 6.30 ಕ್ಕೆ ದೆಹಲಿಯ ಧ್ಯಾನ್ ಚಂದ್ ಸ್ಟೇಡಿಯಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದವರಿಗೆ ಸನ್ಮಾನ ಮಾಡಲಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಅಥ್ಲೀಟ್ ನೀರಜ್ ಚೋಪ್ರಾ ಅವರು ಜಾವೆಲಿನ್ ಚಿನ್ನ ಗೆದ್ದರೆ, ಗಾಲ್ಫ್ ಕ್ರೀಡೆಯಲ್ಲಿ ಕರ್ನಾಟಕದ ಅದಿತಿ ಅಮೋಘ ಪ್ರದರ್ಶನ ನೀಡಿದ್ದಾರೆ. ಒಟ್ಟಾರೆಯಾಗಿ 1 ಚಿನ್ನ, 2 ಬೆಳ್ಳಿ ಹಾಗೂ 4 ಕಂಚು ಸಹಿತ 7 ಪದಕಗಳನ್ನು ಭಾರತ ಗೆದ್ದುಕೊಂಡಿದೆ.