ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೋಕಿಯೋ ಒಲಿಂಪಿಕ್ಸ್ -ಕರ್ನಾಟಕದಿಂದ ಕೇವಲ ಮೂರು ಸ್ಪರ್ಧಿಗಳು.. ಪದಕ ಗೆದ್ರೆ ಬಿಎಸ್ ವೈ ಸರ್ಕಾರದಿಂದ ಕೋಟಿ ಕೋಟಿ ದುಡ್ಡು…!

admin by admin
July 16, 2021
in Newsbeat, Sports, ಕ್ರೀಡೆ
cm bsy karnataka saakshatv
Share on FacebookShare on TwitterShare on WhatsappShare on Telegram

ಟೋಕಿಯೋ ಒಲಿಂಪಿಕ್ಸ್ -ಕರ್ನಾಟಕದಿಂದ ಕೇವಲ ಮೂರು ಸ್ಪರ್ಧಿಗಳು.. ಪದಕ ಗೆದ್ರೆ ಬಿಎಸ್ ವೈ ಸರ್ಕಾರದಿಂದ ಕೋಟಿ ಕೋಟಿ ದುಡ್ಡು…!

srihari nataraj saakshatv tokyo olympic 2021 ಟೋಕಿಯೋ ಒಲಿಂಪಿಕ್ಸ್ 2021 – ಹೌದು, ಮತ್ತೊಂದು ಒಲಿಂಪಿಕ್ಸ್ ಬಂದಿದೆ. ವಿಶ್ವದ ಮಹಾ ಕ್ರೀಡಾ ಜಾತ್ರೆಯಲ್ಲಿ ಪದಕ ಗೆಲ್ಲಲು ಸಾವಿರಾರು ಕ್ರೀಡಾಪಟುಗಳು ಕನಸು ಕಾಣುತ್ತಿದ್ದಾರೆ. ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವುದು ಪ್ರತಿಯೊಬ್ಬ ಕ್ರೀಡಾಪಟುವಿನ ಕನಸು ಕೂಡ. ಅಮೆರಿಕಾ, ಚೀನಾ, ರಷ್ಯಾದಂತಹ ದೊಡ್ಡ ರಾಷ್ಟ್ರಗಳ ಜೊತೆ ಸಣ್ಣ ಸಣ್ಣ ರಾಷ್ಟ್ರಗಳು ಕೂಡ ಪದಕದ ರೇಸ್ ನಲ್ಲಿ ಪೈಪೋಟಿ ಒಡುತ್ತಿವೆ.
ಆದ್ರೆ 130 ಕೋಟಿ ಜನ ಸಂಖ್ಯೆ ಹೊಂದಿರುವ ವಿಶ್ವದ ದೊಡ್ಡ ರಾಷ್ಟ್ರಗಳಲ್ಲಿ ಒಂದಾಗಿರುವ ಭಾರತಕ್ಕೆ ಒಲಿಂಪಿಕ್ಸ್ ನಲ್ಲಿ ಒಂದು ಪದಕ ಸಿಕ್ಕಿದ್ರೆ ಅದೇ ದೊಡ್ಡ ಸಾಧನೆಯಾಗಿದೆ. ಭಾರತಕ್ಕೆ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವುದಕ್ಕಿಂತ ಸ್ಪರ್ಧಿಸುವುದೇ ದೊಡ್ಡ ಸಾಧನೆಯಾಗಿದೆ. ಆದ್ರೂ ಕಳೆದ ನಾಲ್ಕೈದು ಒಲಿಂಪಿಕ್ ಗೇಮ್ಸ್ ಗಳಲ್ಲಿ ಭಾರತದ ಸಾಧನೆ ಸ್ವಲ್ಪ ಮಟ್ಟಿನ ಸಮಾಧಾನವನ್ನು ತಂದಿರುವುದಂತೂ ಸುಳ್ಳಲ್ಲ. ಜೊತೆಗೆ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲಬಹುದು ಅನ್ನೋ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.
ಅದೇನೇ ಇರಲಿ. ಈ ಬಾರಿಯ ಒಲಿಂಪಿಕ್ಸ್ ಕ್ರೀಡಾಕೂಟದ ತಯಾರಿಗೆ ಕೋವಿಡ್ -19 ಸೋಂಕು ಅಡ್ಡಿಯನ್ನುಂಟು ಮಾಡಿದೆ. ಇದು ವಿಶ್ವದ ಎಲ್ಲ ಕ್ರೀಡಾಪಟುಗಳು ಕೂಡ ಈ ತೊಂದರೆಯನ್ನು ಅನುಭವಿಸಿದ್ದಾರೆ.
ಆದ್ರೆ ಭಾರತದಲ್ಲಿ ಒಲಿಂಪಿಕ್ಸ್ ತಯಾರಿ ಹೇಗೆ ನಡೆಯುತ್ತೆ ? ಈ ಪ್ರಶ್ನೆಗೆ ಉತ್ತರ ತುಂಬಾನೇ ಸುಲಭವಾಗಿದೆ. ಅಮೆರಿಕಾ, ಚೀನಾದಂತಹ ರಾಷ್ಟ್ರಗಳಲ್ಲಿ ಒಲಿಂಪಿಕ್ಸ್ ಕ್ರೀಡಾಪಟುಗಳನ್ನು ಚಿಕ್ಕ ವಯಸ್ಸಿನಲ್ಲೇ ಅವರ ಪ್ರತಿಭೆಯನ್ನು ಗುರುತಿಸಿ ತರಬೇತಿಯನ್ನು ನೀಡಲಾಗುತ್ತಿದೆ. ಆದ್ರೆ ನಮ್ಮ ದೇಶದಲ್ಲಿ ಕ್ರೀಡಾಪಟು ಒಬ್ಬ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಆತನಿಗೆ ತರಬೇತಿಯನ್ನು ನೀಡಲಾಗುತ್ತದೆ. ಬಳಿಕ ಆತ Aditi Ashokಭಾರತವನ್ನು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಪ್ರತಿನಿಧಿಸಿ ಪದಕ ಗೆದ್ರೆ ಸರ್ಕಾರದಿಂದ ನಗದು ಬಹುಮಾನಗಳು ಸಿಗುತ್ತವೆ. ಇಲ್ಲ ಅಂದ್ರೆ ನಯಾ ಪೈಸೆಯೂ ಸಿಗಲ್ಲ. ಇನ್ನು ಸರ್ಕಾರದಿಂದ ಘೋಷಣೆಯಾದ ನಗದು ಬಹುಮಾನ ಯಾವಾಗ ಕೈ ಸೇರುತ್ತೆ ಅಂತ ಗೊತ್ತಿಲ್ಲ. ಸಿಕ್ರೆ ಸಿಕ್ತ್ ಇಲ್ಲ ಅಂದ್ರೆ ಇಲ್ಲ ಅಷ್ಟೇ..
ಇದೀಗ ಕರ್ನಾಟಕ ಸರ್ಕಾರದಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಟೋಕಿಯೋ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದವರಿಗೆ ಕೋಟಿ ಕೋಟಿ ಲೆಕ್ಕಚಾರದಲ್ಲಿ ನಗದು ಬಹುಮಾನ ನೀಡುವುದಾಗಿ ಹೇಳಿದ್ದಾರೆ.
ಚಿನ್ನದ ಪದಕ ಗೆದ್ದವರಿಗೆ ಐದು ಕೋಟಿ, ಬೆಳ್ಳಿ ಪದಕ ಗೆದ್ದವರಿಗೆ ಮೂರು ಕೋಟಿ, ಕಂಚು ಗೆದ್ದವರಿಗೆ ಎರಡು ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದಾರೆ.
ಆದ್ರೆ 2021ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ಭಾರತದ ಸ್ಪರ್ಧಿಗಳಲ್ಲಿ ಕರ್ನಾಟಕದವರು ಇರೋದು ಬರೀ ಮೂರು ಮಂದಿ ಮಾತ್ರ.
ಈ ಮೂವರಿಗೂ ಪದಕ ಗೆಲ್ಲೋದು ಅಷ್ಟೊಂದು ಸುಲಭವಿಲ್ಲ. ಒಂದು ವೇಳೆ ಗೆದ್ರೆ ಅದು ಅತ್ಯಬ್ಧುತ ಸಾಧನೆಯಾಗಲಿದೆ. ಹಾಗೇ ಪದಕ ಗೆಲ್ಲಲಿ ಎಂಬುದೇ ನಮ್ಮ ಹಾರೈಕೆಯೂ ಹೌದು, ಆಶಯವೂ ಹೌದು.
ಆದ್ರೆ ಪ್ರಶ್ನೆ ಅದಲ್ಲ. ಈ ನಗದು ಬಹುಮಾನ, ಸನ್ಮಾನ ಒಲಿಂಪಿಕ್ಸ್ ಟೂರ್ನಿಗೆ ಹೋಗುವ ಮುನ್ನ ಬೇಕಾಗಿರಲಿಲ್ಲ. ಅದರ ಬದಲು ಅವರು ಕಷ್ಟಪಟ್ಟು ಅಭ್ಯಾಸ ನಡೆಸುತ್ತರಲ್ವಾ ಆಗ ಸಿಕ್ಕಿದ್ರೆ ಎಷ್ಟೋ ಸಹಾಯವಾಗುತ್ತಿತ್ತು.
adithi ashok saakshatv tokyo olympic 2021 ಬಹುಶಃ ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಕರ್ನಾಟಕದಿಂದ ಕಡಿಮೆ ಸಂಖ್ಯೆಯ ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ನ ಈಜು ಸ್ಪರ್ಧೆಯಲ್ಲಿ ಕರ್ನಾಟಕದಿಂದ ಶ್ರೀಹರಿ ನಟರಾಜನ್, ಈಕ್ವೇಸ್ಟ್ರಿಯನ್ ನಲ್ಲಿ ಫೌದ್ ಮಿರ್ಜಾ ಹಾಗೂ ಗಾಲ್ಪ್ ನಲ್ಲಿ ಆದಿತಿ ಅಶೋಕ್ ಅವರು ಮಾತ್ರ ಸ್ಪರ್ಧೆ ಮಾಡುತ್ತಿದ್ದಾರೆ. ಈ ಮೂವರಿಗೂ ಕರ್ನಾಟಕದ ಸರ್ಕಾರದಿಂದ ಸನ್ಮಾನ ಸಿಕ್ಕಿದ್ದು, 10 ಲಕ್ಷ ರೂಪಾಯಿ ನಗದು ಬಹುಮಾನವೂ ಸಿಕ್ಕಿದೆ. ಇದು ಒಳ್ಳೆಯದ್ದೇ. ಆದ್ರೆ ಈ ಹಣ ಅವರ ತರಬೇತಿ ಅವಧಿಯಲ್ಲಿ ಸಿಗುತ್ತಿದ್ರೆ ಇನ್ನೂ ಒಳ್ಳೆಯದಾಗುತ್ತಿತ್ತು.
ಈ ನಡುವೆ, ಹಾಕಿ ಮತ್ತು ಅಥ್ಲೆಟಿಕ್ಸ್ ನಲ್ಲಿ ಯಾವೊಬ್ಬ ಸ್ಪರ್ಧಿಯೂ ಕರ್ನಾಟಕದಿಂದ ಆಯ್ಕೆಯಾಗಿಲ್ಲ.
ಒಟ್ಟಿನಲ್ಲಿ ಕರ್ನಾಟಕದಿಂದ ಪದಕ ಗೆಲ್ಲುವ ಭರವಸೆಯಂತೂ ಇಲ್ಲ. ಹೀಗಾಗಿಯೇ ಸಿಎಂ ಬಿಎಸ್ ವೈ ಧೈರ್ಯದಿಂದಲೇ ಕೋಟಿ ಕೋಟಿ ಲೆಕ್ಕಚಾರದಲ್ಲಿ ನಗದು ಬಹುಮಾನ ನೀಡುವುದಾಗಿ ಹೇಳಿದ್ದಾರೆ. ಏನೇ ಆಗ್ಲಿ, ಈ ಮೂವರು ಸ್ಪರ್ಧಿಗಳಾದ್ರೂ ಕರ್ನಾಟಕದ ಮರ್ಯಾದೆ ಉಳಿಸಿದ್ದಾರೆ. ಈ ಮೂವರು ಸ್ಪರ್ಧಿಗಳಿಗೂ ಆಲ್ ದಿ ಬೆಸ್ಟ್..

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026
Tags: #saakshatvAditi Ashokbengalurucm bsycm yadiyurappaEquestrianFouaad MirzagolfkarnatakaTokyo OlympicsTokyo Olympics 2021
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram