ಟೋಕಿಯೊ ಒಲಿಂಪಿಕ್ಸ್ – 6 ನೇ ದಿನ ಭಾರತದ ಪಾಲಿಗೆ ಶುಭ ಗುರುವಾರ
ಪುರುಷರ ಹಾಕಿ ತಂಡ
ಹಾಕಿಯಲ್ಲಿ ಬಲಿಷ್ಠ ಅರ್ಜೆಂಟೀನಾ ತಂಡವನ್ನು ಸೋಲಿಸಿ ಭಾರತದ ಪುರುಷರ ಹಾಕಿ ತಂಡ ಕ್ವಾರ್ಟರ್ ಫೈನಲ್ ತಲುಪಿದೆ.
2016ರ ರಿಯೋ ಒಲಿಂಪಿಕ್ಸ್ ಚಾಂಪಿಯನ್ ಅರ್ಜೆಂಟೀನಾ ವಿರುದ್ಧ ಭಾರತದ ಯುವಕರು 3-1 ಅಂತರದಿಂದ ಗೆಲುವು ಸಾಧಿಸಿದರು.
ಬ್ಯಾಡ್ಮಿಂಟನ್
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಡೆನ್ಮಾರ್ಕ್ ನ ಮಿಯಾ ಬ್ಲಿಕ್ ಫೆಲ್ಟ್ ಅವರನ್ನು ಪ್ರೀ ಕ್ವಾರ್ಟರ್ ಫೈನಲ್ ನಲ್ಲಿ ಮಣಿಸಿ ಪಿ.ವಿ.ಸಿಂಧು ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಆರ್ಚರಿ
ಭಾರತದ ಆರ್ಚರ್ ದೀಪಿಕಾ ಕುಮಾರಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಹೊಸ ಭರವಸೆ ಮೂಡಿಸಿದ್ದು, ಮಹಿಳೆಯರ ವೈಯಕ್ತಿಕ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ಪ್ರಿ-ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ಬಾಕ್ಸಿಂಗ್
ಭಾರತದ ಬಾಕ್ಸರ್ ಸತೀಶ್ ಕುಮಾರ್, ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದ್ದಾರೆ. ಪುರುಷರ ಸೂಪರ್ ಹೆವಿವೇಟ್ (91+ ಕೆ.ಜಿ.) ವಿಭಾಗದಲ್ಲಿ 32 ವರ್ಷದ ಸತೀಶ್, ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4-1ರ ಅಂತರದ ಗೆಲುವು ದಾಖಲಿಸಿಕೊಂಡಿದ್ದಾರೆ.
ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಬಾಕ್ಸರ್ ಪೂಜಾ ರಾಣಿ 75 ಕೆಜಿ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಮೂಲಕ ಮತ್ತೊಂದು ಪ್ರಮುಖ ಬಾಕ್ಸಿಂಗ್ ಆಶಾಕಿರಣವಾಗಿ ಗೋಚರಿಸಿದ್ದಾರೆ.
ಇದಕ್ಕೂ ಮೊದಲು ಲೊವ್ಲಿನಾ ಬೊರ್ಗೊಹೈನ್ ಮಹಿಳೆಯರ 69 ಕೆ.ಜಿ. ವಿಭಾಗದ ಸ್ಪರ್ಧೆಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
#Tokyo #Olympics2020 #LiveUpdates