ಟೋಕಿಯೊ ಒಲಿಂಪಿಕ್ಸ್ – ಭಾರತೀಯ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ 7 ನೇ ದಿನ
ಬ್ಯಾಡ್ಮಿಂಟನ್
ಟೋಕಿಯೊ ಒಲಿಂಪಿಕ್ಸ್ನ ಮಹಿಳಾ ಸಿಂಗಲ್ಸ್ ಕ್ವಾರ್ಟರ್ಫೈನಲ್ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಡೆನ್ಮಾರ್ಕ್ ನ ಮಿಯಾ ಬ್ಲಿಕ್ ಫೆಲ್ಟ್ ಅವರನ್ನು 16 ರ ಸುತ್ತಿನಲ್ಲಿ 21-15, 21-13 ರಿಂದ ಮಣಿಸಿ ಪಿ.ವಿ.ಸಿಂಧು ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಕ್ವಾರ್ಟರ್ ಫೈನಲ್ ನಲ್ಲಿ ಪಿವಿ ಸಿಂಧು ಜಪಾನ್ ನ ಯಮಗುಚಿ ವಿರುದ್ಧ ಮೊದಲ ಪಂದ್ಯವನ್ನು ಗೆದ್ದಿದ್ದಾರೆ.

ವನಿತೆಯರ ಹಾಕಿ
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತದ ವನಿತೆಯರ ಹಾಕಿ ತಂಡ ಐರ್ಲೆಂಡ್ ವಿರುದ್ಧ ಗೆದ್ದು ಕ್ವಾರ್ಟರ್ಫೈನಲ್ ಪ್ರವೇಶದ ಕನಸು ಜೀವಂತವಾಗಿರಿಸಿಕೊಂಡಿದೆ. ನವನೀತ್ ಕೌರ್ ಏಕೈಕ ಗೋಲಿನ ನೆರವಿನಿಂದ ಭಾರತ ವನಿತೆಯರ ತಂಡ 1-0 ಗೋಲುಗಳ ಅಂತರದಿಂದ ಐರ್ಲೆಂಡ್ ವಿರುದ್ಧ ಗೆಲುವು ಸಾಧಿಸಿದೆ.
ಆರ್ಚರಿ
ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದಲ್ಲಿ ಆರ್ಚರ್ ದೀಪಿಕಾ ಕುಮಾರಿ ಕ್ವಾರ್ಟರ್ ಫೈನಲ್ನಲ್ಲಿ ಕೊರಿಯಾದ ಅಗ್ರ ಶ್ರೇಯಾಂಕಿತ ಆನ್ ಸ್ಯಾನ್ ವಿರುದ್ಧ ಆಘಾತಕಾರಿ ಸೋಲನುಭವಿಸಿದ್ದಾರೆ. ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್ ನಲ್ಲಿ ದೀಪಿಕಾ ಪಯಣ ಕೊನೆಗೊಂಡಿದೆ.
ಬಾಕ್ಸಿಂಗ್

ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಚೀನಾದ ನಿಯಾನ್ ಚಿನ್ ವಿರುದ್ಧ 4-1 ಅಂಕಗಳ ಅಂತರದಿಂದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಪಂದ್ಯ ಗೆದ್ದು, ಸೆಮಿ ಫೈನಲ್ ತಲುಪಿದ್ದಾರೆ. ಇದರೊಂದಿಗೆ ಅವರು ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ತಮ್ಮ ಮೊದಲ ಬಾಕ್ಸಿಂಗ್ ಪದಕದ ಭರವಸೆ ನೀಡಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತದ ಬಾಕ್ಸಿಂಗ್ ಲೆಜೆಂಡ್ ಮೇರಿ ಕೋಮ್ ಪ್ರಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೊಲಂಬಿಯಾದ ವೇಲೆಂಶಿಯ ವಿರುದ್ಧ 2-3 ಅಂಕಗಳಿಂದ ಸೋತು ರಿಂಗ್ಸ್ ನಿಂದ ನಿರ್ಗಮಿಸಿದ್ದಾರೆ.
#Tokyo #Olympics #Indianfans








