ಟೋಕಿಯೋ ಒಲಂಪಿಕ್ಸ್ – ಬ್ಯಾಡ್ಮಿಂಟನ್ ನಲ್ಲಿ ಕಂಚಿನ ಪದಕ ಗೆದ್ದ ಪಿವಿ ಸಿಂಧು
ಟೋಕಿಯೋ ಒಲಂಪಿಕ್ಸ್ ನಲ್ಲಿ ಪಿವಿ ಸಿಂಧು ಭಾರತಕ್ಕೆ ಬ್ಯಾಡ್ಮಿಂಟನ್ ನಲ್ಲಿ ಕಂಚಿನ ಪದಕ ತಂದು ಕೊಟ್ಟಿದ್ದಾರೆ. ಇದರೊಂದಿಗೆ ಭಾರತಕ್ಕೆ ಎರಡನೇ ಒಲಂಪಿಕ್ ಪದಕ ಗೆದ್ದ ಎರಡನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಸಿಂಧು ಪಾತ್ರರಾಗಿದ್ದಾರೆ.
ಸೆಮಿಫೈನಲ್ ಪಂದ್ಯದಲ್ಲಿ ಎರಡನೇ ಶ್ರೇಯಾಂಕಿತೆ ತೈಜು ಯಿಂಗ್ ವಿರುದ್ಧ ಪಿವಿ ಸಿಂಧು ಸೋಲು ಕಂಡಿದ್ದು, ಇಂದು ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಸಿಂಧು ಚೀನಾದ ಹೀ ಬಿಂಗ್ಜಿಯಾವೊ ವಿರುದ್ಧ 21-13, 21-15 ನೇರ ಸೆಟ್ ಗಳಿಂದ ಗೆಲುವು ಸಾಧಿಸಿದ್ದಾರೆ.

ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದರೆ, ಪಿವಿ ಸಿಂಧು ಭಾರತಕ್ಕೆ ಬ್ಯಾಡ್ಮಿಂಟನ್ ನಲ್ಲಿ ಎರಡನೇ ಪದಕ ಗೆದ್ದಿದ್ದಾರೆ.
#TokyoOlympics #PVSindhu #bronzemedal







