ಟೋಕಿಯೋ ಒಲಿಂಪಿಕ್ಸ್ | ಕುಸ್ತಿಯಲ್ಲಿ ಫೈನಲ್ ಗೆ ರವಿ ದಹಿಯಾ
ಟೋಕಿಯೋ : ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದ್ದು, ಪುರುಷರ ಫ್ರೀಸ್ಟೈಲ್ 57 ಕೆಜಿ ಕುಸ್ತಿಯಲ್ಲಿ ಭಾರತದ ರವಿ ದಹಿಯಾ ಫೈನಲ್ ಪ್ರವೇಶಿಸಿದ್ದಾರೆ.
ಇಂದು ನಡೆದ ಪುರುಷರ ಫ್ರೀಸ್ಟೈಲ್ 57 ಕೆಜಿ ಕುಸ್ತಿ ಸೆಮಿಫೈನಲ್ ನಲ್ಲಿ ರವಿ ದಹಿಯಾ ಅವರು, ಬಲ್ಗೇರಿಯಾದ ಜಾರ್ಜಿ ವಾಂಗೆಲೋವ್ ವಿರುದ್ಧ ಭರ್ಜರಿ ಜಯ ಸಾಧಿಸಿದರು.
ಇಂದು ನಡೆದ ಬಾಕ್ಸಿಂಗ್ ಸ್ಪರ್ಧೆಯ 69 ಕೆಜಿ ವಿಭಾಗದಲ್ಲಿ ಟರ್ಕಿಯ ಬುಸೆನಾಜ್ ಸುರ್ ಮನೇಲಿ ವಿರುದ್ಧ ಲವ್ಲೀನಾ 0-5 ಅಂಕಗಳಿಂದ ಸೋತಿದ್ದರು.
ಈ ಪಂದ್ಯ ಸೋತರೂ ಬಾಕ್ಸಿಂಗ್ ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಎಲ್ಲ ಸ್ಪರ್ಧಿಗಳಿಗೆ ಪದಕ ನೀಡುವ ಕಾರಣ ಲವ್ಲೀನಾ ಕಂಚಿನ ಪದಕಕ್ಕೆ ಪಾತ್ರರಾಗಿದ್ದಾರೆ.









