ಟೋಕಿಯೋ ಒಲಂಪಿಕ್ಸ್ Tokyo Olympics : ಕುಸ್ತಿಯಲ್ಲಿ ಬೆಳ್ಳಿ ಗೆದ್ದ ರವಿಕುಮಾರ್
ಟೋಕಿಯೋ : ಒಲಂಪಿಕ್ಸ್ ನಲ್ಲಿ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ ಬೆಳ್ಳಿಗೆ ಮುತ್ತಿಟ್ಟಿದ್ದಾರೆ.
57 ಕೆಜಿ ವಿಭಾಗದ ಕುಸ್ತಿಯ ಫೈನಲ್ ಪಂದ್ಯದಲ್ಲಿ ರಷ್ಯಾದ ಜೌರ್ ಉಗುವ್ ವಿರುದ್ಧ ರವಿ ಕುಮಾರ್ ಸೋಲನುಭವಿಸಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
ಈ ಮೂಲಕ ಭಾರತಕ್ಕೆ ಕುಸ್ತಿಯಲ್ಲಿ ಬೆಳ್ಳಿ ಗೆದ್ದ ಭಾರತದ ಎರಡನೇ ಕುಸ್ತಿಪಟು ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ.
ಇಂದಿನ ಪಂದ್ಯದಲ್ಲಿ ರವಿಕುಮಾರ್ ದಹಿಯಾ ಅವರು 4-7 ರ ಅಂತರದಲ್ಲಿ ಜೌರ್ ಉಗುವ್ ವಿರುದ್ಧ ಸೋಲು ಕಂಡರು.
ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲೇ ಪದಕ ತಂದುಕೊಡುತ್ತಿರುವ ದೇಶದ ಐದನೇ ಭಾರತೀಯ ಕುಸ್ತಿಪಟು ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ.
1952ರಲ್ಲಿ ಕೆ.ಡಿ ಜಾಧವ್, ಸುಶೀಲ್ ಕುಮಾರ್(2008 ಮತ್ತು 2012), ಯೋಗೇಶ್ವರ್ ದತ್(2012) ಮತ್ತು ಸಾಕ್ಷಿ ಮಲಿಕ್(2016)ರಲ್ಲಿ ಭಾರತಕ್ಕೆ ಪದಕ ತಂದುಕೊಟ್ಟಿದ್ದರು.









