ಡ್ರಗ್ಸ್ ಕೇಸ್ : ರವಿತೇಜಾ, ರಾಣಾ, ರಕುಲ್ ಸೇರಿ 10 ಜನರಿಗೆ ಮತ್ತೆ ಸಂಕಷ್ಟ – ಇಡಿ ಸಮನ್ಸ್
ನವದೆಹಲಿ: ಸ್ಯಾಂಡಲ್ ವುಡ್ ಬಾಲಿವುಡ್ ಸೇರಿ ವಿವಿಧ ಸಿನಿಮಾರಂಗಗಳಲ್ಲಿ ತಲ್ಲಣ ಸೃಷ್ಟಿ ಮಾಡಿದ್ದ ಡ್ರಗ್ ಕೇಸ್ ಇತ್ತೀಚೆಗೆ ಮತ್ತೆ ಸುದ್ದಿಯಾಗ್ತಿದೆ.. ಅಂದ್ಹಾಗೆ ಇತ್ತೀಚೆಗೆ ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿರುವ ಖಚಿತವಾಗಿತ್ತು.. ಇದೀಗ 4 ವರ್ಷದ ಹಿಂದಿನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿತೇಜಾ , ರಾಣಾ, ರಕುಲ್ ಪ್ರೀತ್ ಸಿಂಗ್, ಚಾರ್ಮಿ ಕೌರ್ ಸೇರಿದಂತೆ 10 ಜನರಿಗೆ ಇಡಿ ಸಮನ್ಸ್ ನೀಡಿದೆ ಎಂದು ವರದಿಯಾಗಿದೆ.
ಹೌದು ಸೆಪ್ಟೆಂಬರ್ 6ಕ್ಕೆ ರಕುಲ್ ಪ್ರೀತ್ ಸಿಂಗ್, ಸೆಪ್ಟೆಂಬರ್ 8ಕ್ಕೆ ರಾಣಾ ದಗ್ಗುಬಾಟಿ ಮತ್ತು ಸೆಪ್ಟೆಂಬರ್ 9ರಂದು ರವಿತೇಜ ಹೈದರಬಾದ್ ನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲ ಟಾಲಿವುಡ್ ನ ಸ್ಟಾರ್ ನಿರ್ದೇಶಕ ಪುರಿ ಜಗನ್ನಾಥ್ ಅವರಿಗೂ ಆಗಸ್ಟ್ 31ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ರವಿತೇಜ ಡ್ರೈವರ್ ಮತ್ತು ಇನ್ನೊಬ್ಬ ವ್ಯಕ್ತಿಗೂ ನೋಟಿಸ್ ನೀಡಲಾಗಿದೆ.
ನಟ ದೊಡ್ಡಣ್ಣ ಆಸ್ಪತ್ರೆಗೆ ದಾಖಲು : ಐಸಿಯುನಲ್ಲಿ ಚಿಕಿತ್ಸೆ
2017ರಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ತೆಲಂಗಾಣದ ಅಬಕಾರಿ ಇಲಾಖೆ, 12 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡು ಒಟ್ಟು 12 ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿತ್ತು. ಇದೇ ಪ್ರಕರಣದಲ್ಲಿ ಟಾಲಿವುಡ್ ಸ್ಟಾರ್ ಗಳ ಹೆಸರು ಕೇಳಿ ಬಂದಿತ್ತು. ಆದ್ರೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ಎಸ್‍ಐಟಿ ಯಾರನ್ನೂ ಆರೋಪಿಗಳೆಂದು ಪರಿಗಣಿಸಿರಲಿಲ್ಲ. ಆದ್ರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿತ್ತು. ಅಲ್ಲದೇ ಅದೇ ಸಂದರ್ಭದಲ್ಲಿಯೇ ಟಾಲಿವುಡ್ ಸೆಲೆಬ್ರಿಟಿಗಳೂ ಸೇರಿದಂತೆ ಒಟ್ಟು 62 ಜನರ ಕೂದಲು ಮತ್ತು ಉಗುರು ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆದ್ರೆ ಈ ವರದಿಯಲ್ಲಿ ಎಸ್‍ಐಟಿಗೆ ಯಾವ ಸುಳಿವು ಸಿಕ್ಕಿರಲಿಲ್ಲ ಎನ್ನಲಾಗಿತ್ತು.
1 ಕೋಟಿ ರೂಪಾಯಿ ಕೊಡಿ ಎಂದ ನೆಟ್ಟಿಗನಿಗೆ ರಿಯಲ್ ಹೀರೋ ಸೋನು ಕೊಟ್ಟ ಉತ್ತರ ಇದು..!








