ನವದೆಹಲಿ: ಲಾಕ್‍ಡೌನ್ ಅವಧಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ನಾಳೆ ಬಿಜೆಪಿ ಕಾರ್ಯಕರ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ಕಾರ್ಯಕರ್ತರೊಂದಿಗೆ ಮೋದಿ ಸಂವಾದ ನಡೆಸಲಿದ್ದು, ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಪಾಲ್ಗೊಳ್ಳಲಿದ್ದಾರೆ. ನಮೋ ಆಪ್ ಹಾಗೂ ಇತರೆ ಡಿಜಿಟಿಲ್ ಫ್ಲಾಟ್‍ಫಾರಂನಲ್ಲಿ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.
ಮೋದಿ ನೇತೃತ್ವದ ಸರ್ಕಾರ 2ನೇ ಅವಧಿಯ ಒಂದು ವರ್ಷ ಪೂರ್ಣಗೊಳಿಸಿದ್ದ ಹಿನ್ನೆಲೆಯಲ್ಲಿ ಈಗಾಗಲೇ 61 ವರ್ಚುಯಲ್ ರ್ಯಾಲಿಗಳನ್ನು ನಡೆಸಲಾಗಿದೆ. 11.49 ಕೋಟಿ ಜನರು ಇದನ್ನು ವೀಕ್ಷಣೆ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ 5.41 ಕೋಟಿ ಜನರನ್ನು ಸಂಪರ್ಕಿಸಿದ್ದಾರೆ. ಲಾಕ್‍ಡೌನ್ ಅವಧಿಯಲ್ಲಿ ಪಕ್ಷದ ವತಿಯಿಂದ 22 ಕೋಟಿ ಜನರಿಗೆ ಆಹಾರ ವಿತರಿಸಲಾಗಿದೆ ಎಂದು ಅರುಣ್‍ಸಿಂಗ್ ವಿವರ ನೀಡಿದರು.
film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!
'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...








