JDS | ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ನಾಳೆ ಪದಗ್ರಹಣ
ಬೆಂಗಳೂರು : ಕೇಂದ್ರದ ಮಾಜಿ ಸಚಿವ ಸಿ ಎಂ ಇಬ್ರಾಹಿಂ ಅವರು ಜೆಡಿಎಸ್ ನ ರಾಜ್ಯಾಧ್ಯಕ್ಷರಾಗಿ ನಾಳೆ ಪ್ರದಗ್ರಹಣ ಮಾಡಲಿದ್ದಾರೆ.
ಈ ಬಗ್ಗೆ ವಿಧಾನ ಪರಿಷತ್ ಸದಸ್ಯ ಕೆ.ಎನ್.ತಪ್ಪೇಸ್ವಾಮಿ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ಮಾಹಿತಿ ನೀಡಿದ್ದಾರೆ.
ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಹೆಚ್ ಕೆ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದಿದಕ್ಕೆ ಸಿಎಂ ಇಬ್ರಾಹಿಂ ಅವರು ಪಕ್ಷದ ವಿರುದ್ಧ ಮುನಿಸಿಕೊಂಡು ಜೆಡಿಎಸ್ ಪಕ್ಷ ಸೇರಿದ್ದಾರೆ.
ಅವರು ಜೆಡಿಎಸ್ ಪಾಳಯ ಸೇರುತ್ತಾರೆ ಎಂಬ ಮಾಹಿತಿ ಹೊರ ಬರುತ್ತಿದ್ದಂತೆ ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಇಬ್ರಾಹಿಂ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷರ ಪಟ್ಟ ನೀಡಲಾಗುವುದು ಎಂದು ಅಂದಾಜಿಸಲಾಗಿತ್ತು.
ಅದರಂತೆ ನಾಳೆ ಸಿ ಎಂ ಇಬ್ರಾಹಿಂ ಅವರು ಜೆಡಿಎಸ್ ನ ರಾಜ್ಯ ಸಾರಥಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. Tomorrow-cm-ibrahim-to-take-over-as-jds-president









