ನಾಳೆ ಕೊಡಗು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಲಿರುವ ಉಸ್ತುವಾರಿ ಸಚಿವ ವಿ. ಸೋಮಣ್ಣ
ನಾಳೆಯಿಂದ ಮೂರು ದಿನಗಳ ನಾನು ಕೊಡಗು ಜಿಲ್ಲಾ ಪ್ರವಾಸದಲ್ಲಿರುತ್ತೇನೆ. ಪ್ರವಾಹ ಪೀಡಿತ ಸ್ಥಳಗಳನ್ನು ಪರೀಶಿಲನೆ ನಡೆಸುತ್ತೇನೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ನಾಳೆ ಬೆಳಗ್ಗೆ ತಲಕಾವೇರಿ ಭೂ ಕುಸಿತದ ಪರಿಶೀಲನೆ ನಡೆಸಿದ್ದ ನಂತ್ರ ಕುಶಾಲನಗರ, ಹಾರಂಗಿ ಜಲಾಶಯ ಸೇರಿದಂತೆ ಜಿಲ್ಲೆಯ ವಿವಿಧ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗುವುದು ಎಂದು ವಿ. ಸೋಮಣ್ಣ ಹೇಳಿದ್ದಾರೆ.
15 ಕೋಟಿ ರೂ, ಮೂಲ ಸೌಕರ್ಯಕ್ಕಾಗಿ ನಿರ್ಮಾಣ ಹಂತದಲ್ಲಿರುವ ಫಲಾನುಭವಿಗಳ ಮನೆಗೆ ಬಿಡುಗಡೆ ಮಾಡಿದ್ದೇವೆ. ಇನ್ನು ಪ್ರಧಾನ ಮಂತ್ರಿ ಅವಸ್ ಯೋಜನೆಯಿಂದ ರಾಜ್ಯಕ್ಕೆ 800 ಕೋಟಿ ರೂ. ಬಿಡುಗಡೆ ಆಗಿದೆ. ಜನತೆಯ ನೆರವಿಗೆ ಮೊದಲು ಸ್ಪಂದಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಕಳೆದ ವರ್ಷ 500 ಕೋಟಿ ರೂಪಾಯಿ ಘೋಷಣೆ ಮಾಡಿದ್ದು, 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇವೆ ಎಂದು ಸೋಮಣ್ಣ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್, ಬರಗಾಲ, ಪ್ರವಾಹದಿಂದ ಸಾಕಷ್ಟು ಸಮಸ್ಯೆಗಳು ಉಂಟಾಗಿವೆ. ಜನ ಸಾಮನ್ಯರ ಕಷ್ಟಗಳಿಗೆ ಸ್ಪಂದಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. 1200 ಕೋಟಿಗೂ ಹೆಚ್ಚಿನ ಹಣ ಎಲ್ಲಾ ಜಿಲ್ಲೆಗಳ ಖಾತೆಯಲ್ಲಿವೆ. ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಲಾಗುವುದು ಎಂದು ಸೋಮಣ್ಣ ಅವರು, ರಾಜ್ಯ ಎಲ್ಲಾ ಜಲಾಶಯಗಳು ಶೇ.80ರಷ್ಟು ತುಂಬಿದ ನಂತರ ನೀರನ್ನು ಬಿಡುಗಡೆ ಮಾಡಲು ತಿಳಿಸಿದ್ದೇವೆ. ಪ್ರತಿ 9 ಗಂಟೆಗೊಮ್ಮೆ ಜಲಾಶಯದ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಕಳೆದ ಬಾರಿ ಆಗಿರುವಂತಹ ಅನಾಹುತ ಮತ್ತೆ ಆಗಬಾರದು ಎಂದು ಮುನ್ನೆಚ್ಚೆರಿಕೆ ವಹಿಸಿದ್ದೇವೆ ಎಂದು ಸೊಮಣ್ಣ ತಿಳಿಸಿದ್ರು.
ಇನ್ನು ಮಡಿಕೇರಿ ಜಿಲ್ಲಾಧಿಕಾರಿ ಹಾಗೂ ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಮೊದಲಾದವರು ಈಗಾಗಲೇ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ನಾಳೆ ನಾನು ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ವಸತಿ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.