ಬೆಂಗಳೂರು : ಕೇಂದ್ರ ಕೃಷಿ ಮಸೂದೆಗಳನ್ನು ವಿರೋಧಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ನೇಗಿಲಯೋಗಿಯ ಕಿಚ್ಚಿಗೆ ನಾಳೆ ಇಡೀ ಕರ್ನಾಟಕ ಸಂಪೂರ್ಣ ಬಂದ್ ಆಗಲಿದೆ.
ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ನಿಧನ
ಈ ಬಂದ್ ಗೆ ಐಕ್ಯ ಹೋರಾಟ ಸಮಿತಿ, ರೈತ ಹೋರಾಟ ಸಂಘಟನೆಗಳು, ಕನ್ನಡಪರ ಹೋರಾಟ ಸಂಘಟನೆಗಳು, 25ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು, 35 ರೈತ ಪರ ಸಂಘಟನೆಗಳು, ದಲಿತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿ, ಉತ್ತರ ಕರ್ನಾಟಕ, ಮುಂಬೈ ಕರ್ನಾಟಕದ ವಿವಿಧ ಸಂಘಟನೆಗಳು, ಮಹಾದಯಿ ಹೋರಾಟ ಸಂಘಟನೆ, ಓಲಾ, ಊಬರ್, ಕ್ಯಾಬ್, ಆಟೋ,ಟ್ಯಾಕ್ಸಿ ಅಸೋಸಿಯೇಶನ್, ಆಟೋ ಮಿತ್ರ, ಪೀಸ್ ಆಟೋ ಸಂಘಟನೆ, ಖಾಸಗಿ ಟೂರಿಸ್ಟ್ ಮತ್ತು ಟ್ಯಾಕ್ಸಿ ಮಾಲೀಕರ ಸಂಘಗಳು ಬೆಂಬಲ ಕೊಡುತ್ತವೆ.
ನಾಳೆ ಏನಿರುತ್ತೆ.. ಏನಿರಲ್ಲ..?
ಏನಿರುತ್ತೆ?
ನಾಳೆ ಹಾಲು, ಹಣ್ಣು, ತರಕಾರಿ, ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆ ಸೇವೆಗಳು ಇರಲಿವೆ.
ಹೋಟೆಲ್ ಗಳು ಎಂದಿನಂತೆ ಓಪನ್ ಇರಲಿವೆ.
ಕೆಎಸ್ ಆರ್ ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿದೆ.
ಏನಿರಲ್ಲ?
ಬಂದ್ ಬೆಂಬಲ ಸೂಚಿಸಿರುವ ಕಾರಣ ಓಲಾ-ಉಬರ್, ಆಟೋ-ಟ್ಯಾಕ್ಸಿ ಸೇವೆಗಳು ಇರುವುದಿಲ್ಲ.
ಖಾಸಗಿ ಬಸ್, ಲಾರಿ ಸೇವೆಗಳು ಬಂದ್.
ಅಂಗಡಿ ಮುಂಗಟ್ಟು ಕ್ಲೋಸ್, ಮಾಲ್ ಗಳು ಓಪನ್ ಆಗಲ್ಲ.
ಪ್ರತಿಭಟನೆಯ ತೀವ್ರತೆ ನೋಡಿಕೊಂಡು ಕೈಗಾರಿಕೆಗಳು, ಕಂಪನಿಗಳು ಮುಚ್ಚುವ ಬಗ್ಗೆ ನಿರ್ಧಾರ.








