ಪ್ರತ್ಯೇಕ ಜಿಲ್ಲೆ ರಚನೆಗೆ ಆಗ್ರಹ : ನಾಳೆ ಶಿರಸಿ ಬಂದ್
ಶಿರಸಿ : ಪ್ರತ್ಯೇಕ ಜಿಲ್ಲೆ ರಚನೆಗೆ ಆಗ್ರಹಿಸಿ ಶಿರಸಿ ಜಿಲ್ಲಾ ಹೋರಾಟ ಸಮಿತಿ ನಾಳೆ ಶಿರಸಿ ಬಂದ್ ಗೆ ಕರೆ ಕೊಟ್ಟಿದೆ.
ಶಿರಸಿ ಜಿಲ್ಲಾ ಹೋರಾಟ ಸಮಿತಿ ದಶಕಗಳ ಕಾಲದಿಂದ ಪ್ರತ್ಯೇಕ ಜಿಲ್ಲೆಗೆ ಹೋರಾಟ ನಡೆಸುದ್ದು, ತನ್ನ ಹೋರಾಟವನ್ನ ಮತ್ತಷ್ಟು ತೀವ್ರಗೊಳಿಸುವ ಉದ್ದೇಶದಿಂದ ನಾಳೆ ಶಿರಸಿ ಬಂದ್ ಗೆ ಕರೆ ನೀಡಿದೆ.
ಸದ್ಯ ಶಿರಸಿ ಉತ್ತರ ಕನ್ನಡ ಜಿಲ್ಲೆಯ ಭಾಗವಾಗಿದೆ. ಆದ್ರೆ ಈ ಉತ್ತರ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 12 ತಾಲೂಕುಗಳಿದ್ದು, ಇದರಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಹೀಗಾಗಿ ಈ ಜಿಲ್ಲೆಯನ್ನ ವಿಭಜಿಸಿ 7 ತಾಲೂಕುಗಳನ್ನು ಒಳಗೊಂಡ ಶಿರಸಿ ಜಿಲ್ಲೆ ರಚನೆಗೆ ಶಿರಸಿ ಜಿಲ್ಲಾ ಹೋರಾಟ ಸಮಿತಿ ಆಗ್ರಹಿಸಿದೆ.
ಈ ಸಂಬಂಧ ಸರ್ಕಾರದ ಮೇಲೆ ಒತ್ತಡ ಹೇರಲು ಫೆ. 24ರಂದು ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿರಸಿ ಬಂದ್ ಗೆ ಕರೆ ನೀಡಲಾಗಿದೆ.
ಈ ಹಿಂದೆ ತಮಟೆ ಜಾಗೃತಿ, ಪಂಜಿನ ಮೆರವಣಿಗೆ, ಪತ್ರ ಚಳವಳಿಗಳಂತಹ ಶಾಂತ ರೀತಿಯ ಹೋರಾಟಗಳ ಮೂಲಕ ಶಿರಸಿ ಜಿಲ್ಲಾ ಹೋರಾಟ ಸಮಿತಿ ನೂತನ ಜಿಲ್ಲೆ ರಚನೆಗೆ ಸರ್ಕಾರವನ್ನು ಆಗ್ರಹಿಸಿತ್ತು.
