ಪಠ್ಯ ಕಡಿತಕ್ಕೆ PUC ವಿದ್ಯಾರ್ಥಿಗಳ ಮನವಿ
ಬೆಂಗಳೂರು : ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಪಠ್ಯ ಕಡಿತಕ್ಕೆ PUC ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಪಠ್ಯವನ್ನು ಕಡಿತ ಮಾಡಲಾಗಿದೆ. ಹೀಗಾಗಿ ನಮಗೂ ಪರೀಕ್ಷ ಪಠ್ಯವನ್ನ ಕಡಿತ ಮಾಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳ ಪೋಷಕರು ಬೆಂಬಲ ಸೂಚಿಸಿದ್ದಾರೆ. ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ತರಗತಿಗಳು ವಿಳಂಬವಾಗಿ ಆರಂಭವಾಗಿದ್ದವು. ಇದೀಗ ಕೊರೊನಾ ಸೋಂಕಿನ ಮೂರನೇ ಅಲೆ ಎಂದು ಆನ್ ಲೈನ್ ತರಗತಿಗಳಲ್ಲಿ ಪಾಠ ಮಾಡಲಾಗಿದೆ. ಹೀಗಾಗಿ ಎಸ್ಎಸ್ಎಲ್ಸಿ ಪರೀಕ್ಷೆಯಂತೆ ಈ ವರ್ಷದ ಪಿಯು ಮುಖ್ಯ ಪರೀಕ್ಷೆಯಲ್ಲಿ ಭಾಷಾ ವಿಷಯ ಮಾತ್ರವಲ್ಲ, ಐಚ್ಛಿಕ ಸಬ್ಜೆಕ್ಟ್ ಗಳಲ್ಲು 20% ಪಠ್ಯ ಕಡಿತ ಮಾಡಿ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಮನವಿ ಮಾಡಿದ್ದಾರೆ.
ಇತ್ತ ವಿದ್ಯಾರ್ಥಿಗಳ ಮನವಿ ಮೇಲೆ ಶಿಕ್ಷಣ ಇಲಾಖೆ ಪರಿಶೀಲನಾ ಸಭೆ ನಡೆಸುತ್ತಿದೆ. ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹಾಗೂ ಪಿಯು ಬೋರ್ಡ್ ಅಧಿಕಾರಿಗಳು ಪಠ್ಯ ಕಡಿತದ ಬಗ್ಗೆ ಚರ್ಚೆ ನಡೆಸಿದ್ದಾರೆ.
ಹಿಜಬ್ ಹೋರಾಟ
ಬೆಂಗಳೂರು : ಶಾಲೆ ಕಾಂಪೌಂಡ್ ಒಳಗೆ ಹಿಜಬ್ ಧರಿಸಬಾರದು, ಹಸಿರು ಶಾಲು, ಕೇಸರಿ ಶಾಲು ಧರಿಸಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಾಲೆ ಸಮವಸ್ತ್ರ ಕಡ್ಡಾಯ ಅಂತಾ ಈಗಾಗಲೇ ಶಿಕ್ಷಣ ಸಚಿವರು ಹೇಳಿದ್ದಾರೆ. ವಿದ್ಯಾರ್ಥಿಗಳು ಕಲಿತು ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎಂಬ ಸಂಸ್ಕಾರ ಕಲಿಯಲು ಒಳ್ಳೆಯದಾಗುತ್ತದೆ ಎಂದಿದ್ದಾರೆ.
ಕೊರೊನಾ ಪ್ರಕರಣಗಳು
ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 1,72,433 ಲಕ್ಷ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಟ್ವೀಟ್ ಮಾಡಿದೆ. ಇನ್ನೂ ದೇಶದಲ್ಲಿ ಪ್ರತಿದಿನದ ಕೊರೊನಾ ಸೋಂಕಿತರ ಪ್ರಮಾಣವು 10.99 ರಷ್ಟಿದ್ದು, ವಾರದ ಏರಿಕೆ ಪ್ರಮಾಣವು 12.98 ರಷ್ಟಿದೆ. ಸಕ್ರೀಯ ಪ್ರಕರಣಗಳ ಸಂಖ್ಯೆ 15,33,921 ಲಕ್ಷ ಇದ್ದು, ಸಕ್ರೀಯ ಪ್ರಮಾಣ ಶೇ 3.67 ರಷ್ಟಿದೆ.
ಎಲ್ಲ ಪುರುಷರನ್ನು ಅತ್ಯಾಚಾರಿಗಳೆಂದು ಕರೆಯುವುದು ಸರಿಯಲ್ಲ.. ಸ್ಮೃತಿ ಇರಾನಿ
ದೇಶದ ಪ್ರತಿಯೊಂದು ಮದುವೆಯನ್ನು ಹಿಂಸಾತ್ಮಕ ಎಂದು ಖಂಡಿಸುವುದು ಸರಿಯಲ್ಲ ಮತ್ತು ದೇಶದ ಪ್ರತಿಯೊಬ್ಬ ವ್ಯಕ್ತಿಯನ್ನು ಅತ್ಯಾಚಾರಿ ಎಂದು ಕರೆಯುವುದು ಸರಿಯಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವೈವಾಹಿಕ ಅತ್ಯಾಚಾರದ ಕುರಿತು ಸಂಸತ್ತಿನಲ್ಲಿ ತಮ್ಮ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ.
100 ಕ್ಕೂ ಹಚ್ಚು ಪಾಕ್ ಸೈನಿಕರನ್ನ ಕೊಂದಿದ್ದೇವೆ- ಬಲೂಚಿಸ್ಥಾನ್ ಲಿಬರೇಷನ್ ಆರ್ಮಿ.
ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಎಂಬ ಉಗ್ರಗಾಮಿ ಸಂಘಟನೆ ಗುರುವಾರ ಪಾಕಿಸ್ತಾನದ ಎರಡು ಸೇನಾ ಶಿಬಿರಗಳಲ್ಲಿ 100ಕ್ಕೂ ಹೆಚ್ಚು ಸೈನಿಕರನ್ನು ಕೊಂದಿರುವುದಾಗಿ ಹೇಳಿಕೊಂಡಿದೆ.
ಸಿರಿಯಾದಲ್ಲಿ ಅಮೆರಿಕ ಸೇನೆ ದಾಳಿಗೆ 13 ನಾಗರಿಕರು ಬಲಿ
ಸಿರಿಯಾದಲ್ಲಿ ಅಲ್ ಖೈದಾ ನಾಯಕನನ್ನು ಗುರಿಯಾಗಿಸಿಕೊಂಡು ಅಮೆರಿಕಾದ ವಿಶೇಷ ಪಡೆಗಳು ಗುರುವಾರ ಬೆಳಿಗ್ಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಅಮೆರಿಕದ ರಕ್ಷಣಾ ಇಲಾಖೆ ಮಾಹಿತಿ ನೀಡಿದೆ. ಆದರೆ ಈ ದಾಳಿಯಲ್ಲಿ ಮಕ್ಕಳು ಸೇರಿದಂತೆ 13 ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅನೇಕ ನಾಗರಿಕರು ಗಾಯಗೊಂಡಿದ್ದಾರೆ ಎಂಬ ವರದಿಗಳು ಸ್ಥಳದಿಂದ ಬರುತ್ತಿವೆ.
ಪುನೀತ್ ಗೆ ಅಲ್ಲು ನಮನ
ಪುನೀತ್ ರಾಜ್ಕುಮಾರ್ ಅವರ ಸಮಾಧಿಗೆ ನಮಿಸಲು ಮತ್ತು ಕುಟುಂಬದವರಿಗೆ ಸಾಂತ್ವಾನ ಹೇಳಲು ನಟ ಅಲ್ಲು ಅರ್ಜನ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದ ಬೆಳಗ್ಗೆ 11 ಗಂಟೆ ಸುಮಾರಿಗೆ ಖಾಸಗಿ ವಿಮಾನದಲ್ಲಿ ಹೈದರಾಬಾದ್ನಿಂದ ಹೊರಟಿದ್ದರು. ಅಲ್ಲು ಅರ್ಜುನ್ 12 ಗಂಟೆಗೆ ಬೆಂಗಳೂರಿಗೆ ತಲುಪಿದ್ದಾರೆ. ಮೊದಲು ಶಿವರಾಜ್ಕುಮಾರ್ ನಿವಾಸಕ್ಕೆ ತೆರಳಿರುವ ಅಲ್ಲು ಅರ್ಜುನ್ ಶಿವಣ್ಣ ದಂಪತಿಗಳೊಂದಿಗೆ ಮಾತನಾಡಿದ್ದಾರೆ. ಇಲ್ಲಿಂದ ಪುನೀತ್ ರಾಜ್ಕುಮಾರ್ ಮನೆಗೆ ಭೇಟಿ ನೀಡಲಿದ್ದಾರೆ. ಅಪ್ಪು ಕುಟುಂಬದ ಸದಸ್ಯರಿಗೆ ಅವರು ಸಾಂತ್ವನ ಹೇಳಿ ನಂತರ ಪುನೀತ್ ರಾಜ್ಕುಮಾರ್ ಅವರ ಸಮಾಧಿ ಸ್ಥಳಕ್ಕೆ ಬಂದು ಅಲ್ಲು ಅರ್ಜುನ್ ನಮನ ಸಲ್ಲಿಸಲಿದ್ದಾರೆ.
ಥಿಯೇಟರ್ ಗಳಿಗೆ ನಿಯಮ ಸಡಿಲ
ಬೆಂಗಳೂರು : ಕೊರೊನಾ ಮೂರನೇ ಅಲೆ ಕಡಿವಾಣಕ್ಕೆ ಜಾರಿ ತಂದಿದ್ದ 50 : 50 ರೂಲ್ಸ್ ಗಳ ಪೈಕಿ ಕೆಲವು ನಿರ್ಬಂದಗಳಿಗೆ ಸರ್ಕಾರ ರಿಲೀಫ್ ಕೊಟ್ಟಿದೆ. film- minister dr k sudhakar reaction
ಆದರೇ ಸಿನಿಮಾ ಥಿಯೇಟರ್, ಮಲ್ಟಿ ಪ್ಲೆಕ್ಸ್ ಗಳ ಮೇಲಿನ ನಿರ್ಬಂಧ ಮುಂದುವರೆಸಲಾಗಿದೆ.
ಈ ಮಧ್ಯೆ ಸಿನಿಮಾ ಮಂದಿರಕ್ಕೆ ನಿಯಮ ಸಡಿಲ ಮಾಡಬೇಕೆಂದು ಮಾತುಗಳು ಕೇಳಿಬರುತ್ತಿದೆ.
ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನಾನು ತೀರ್ಮಾನ ತೆಗೆದುಕೊಳ್ಳಲ್ಲ.ಸಿಎಂ ಬೊಮ್ಮಾಯಿ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಸಿಎಂ ಯಾವ ನಿರ್ಧಾರ ಮಾಡ್ತಾರೆ ನಾವು ಅದಕ್ಕೆ ಬದ್ಧರಾಗಿದ್ದೇವೆಎಂದು ತಿಳಿಸಿದರು.
ಕೊಹ್ಲಿಯನ್ನ ಖುಷಿಪಡಿಸಲು ಬಿಸಿಸಿಐ ಪ್ರಣಾಳಿಕೆ
ಟೀಂ ಇಂಡಿಯಾ ನಾಯಕತ್ವದ ವಿಚಾರವಾಗಿ ಬಿಸಿಸಿಐ ಮತ್ತು ಕೊಹ್ಲಿ ನಡುವೆ ಭಾರೀ ಅಂತರ ಉಂಟಾಗಿರುವುದು ಗೊತ್ತಿರುವ ಸಂಗತಿ. ಆದರೆ, ಈ ಗ್ಯಾಪ್ ಕವರ್ ಮಾಡುವುದಕ್ಕಾಗಿ, ಕೊಹ್ಲಿಯನ್ನ ಖುಷಿಪಡಿಸಲು ಬಿಸಿಸಿಐ ಭಾರಿ ಪ್ರಣಾಳಿಕೆ ರೆಡಿ ಮಾಡಿಕೊಂಡಿದೆ. ಇದರ ಭಾಗವಾಗಿ ಕೊಹ್ಲಿ 100ನೇ ಟೆಸ್ಟ್ ಪಂದ್ಯವನ್ನು ಸ್ಮರಣೀಯವಾಗಿಸಲು ಅದ್ಧೂರಿ ವ್ಯವಸ್ಥೆ ಮಾಡಿಕೊಂಡಿದೆ.
ಶ್ರೇಯಾಂಕದಲ್ಲಿ ಅಗ್ರಸ್ಥಾನದತ್ತ ಕೆಎಲ್ ರಾಹುಲ್
ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಐಸಿಸಿ ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನದತ್ತ ಮುನ್ನುಗ್ಗುತ್ತಿದ್ದಾರೆ. ಇತ್ತೀಚಿನ ಬಿಡುಗಡೆಯಾದ ಶ್ರೇಯಾಂಕದಲ್ಲಿ ರಾಹುಲ್ ಒಂದು ಸ್ಥಾನ ಜಿಗಿದು, ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ಸದ್ಯ ರಾಹುಲ್ ಖಾತೆಯಲ್ಲಿ 729 ರೇಟಿಂಗ್ ಅಂಕಗಳಿವೆ.










