ಓಮಿಕ್ರಾನ್ ಕಾಟ.. ಸಿಂಧುಗೆ ಪಟ್ಟ : ಓದಿ ದಿನ ಟಾಪ್ 5 ಸುದ್ದಿ
01. ರಾಜ್ಯದಲ್ಲಿಂದು 165 ಹೊಸ ಓಮಿಕ್ರಾನ್ ಕೇಸ್‍ಗಳು ವರದಿಯಾಗಿದೆ. ಈ ಎಲ್ಲಾ ಪ್ರಕರಣಗಳು ಬೆಂಗಳೂರಿನಲ್ಲಿಯೇ ಪತ್ತೆಯಾಗಿವೆ. ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಸುಧಾಕರ್ ಅವರು, ಬೆಂಗಳೂರಿನಲ್ಲಿ ಇಂದು 165 ಹೊಸ ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 931 ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು 931 ಕೇಸ್ ಓಮಿಕ್ರಾನ್ ಕೇಸ್‍ಗಳ ಪೈಕಿ, ಬೆಂಗಳೂರು ನಗರ ಒಂದರಲ್ಲೆ 880 ಕೇಸ್‍ಗಳು ದಾಖಲಾಗಿವೆ.
02. ಗೋವಾ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲವಾಗುತ್ತಿದೆ. ಮೊನ್ನೆಯಷ್ಟೆ ಟಿಕೆಟ್ ನಿರಾಕರಿಸಿದ್ದಕ್ಕೆ ಗೋವಾ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಾಲ್ ಪರಿಕ್ಕರ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರ ಹಾದಿಯಲ್ಲಿಯೇ ಗೋವಾ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಬಿಜೆಪಿ ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.
03. ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈ ಬಾರಿ ಸಮಾಜವಾದಿ ಪಾರ್ಟಿ ತುಸು ಜೋರಾಗಿಯೇ ಚುನಾವಣೆಗೆ ತಯಾರಿಗೆ ಆರಂಭಿಸಿದೆ. ಭಾರತದ ಅತಿ ಎತ್ತರದ ಮನುಷ್ಯ ಧರ್ಮೇಂದ್ರ ಪ್ರತಾಪ್ ಸಿಂಗ್ ಗೆ ಮಣೆ ಹಾಕಿದೆ. ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಶನಿವಾರ ಅಧಿಕೃತವಾಗಿ ಸಮಾಜವಾದಿ ಪಾರ್ಟಿ ಸೇರಿದ್ದಾರೆ.
04. ನಾನು ಇವತ್ತು ಬೆಳೆಯುವುದಕ್ಕೆ ಕಾರಣ ಒಂದು ಸಂಘ, ಮತ್ತೊಂದು ಕಾರಣ ಯಡಿಯೂರಪ್ಪ ಅವರು. ನಾನು ಏನಾದರೂ ಯಡಿಯೂರಪ್ಪ ವಿರುದ್ಧ ಗುಂಪು ಕಟ್ಟಿದರೆ, ಅದು ನಮ್ಮ ತಂದೆ ತಾಯಿಗೆ ಮಾಡಿದ ದ್ರೋಹದಂತೆ ಎಂದು ಬಿ.ಎಸ್. ಯಡಿಯೂರಪ್ಪ ಕುರಿತು ಕೆ.ಎಸ್. ಈಶ್ವರಪ್ಪ ಭಾವುಕರಾಗಿದ್ದಾರೆ.
05. ಸೈಯದ್ ಮೋದಿ ಓಪನ್ ಸೂಪರ್-300 ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಅಗ್ರ ಶ್ರೇಯಾಂಕದ ಪಿವಿ ಸಿಂಧು ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಜಯ ಸಾಧಿಸಿದ್ದಾರೆ. ಭಾನುವಾರ ನಡೆದ ಫೈನಲ್‌ನಲ್ಲಿ ಸಿಂಧು 21-13, 21-16ರಲ್ಲಿ ಮಾಳವಿಕಾ ಭನ್ಸೋಡ್ ಅವರನ್ನು ಮಣಿಸಿದ್ದಾರೆ.