ರಾಜ್ಯ ಬಜೆಟ್…..
Karnatka: ಆರ್ಥಿಕ ಸಂಕಷ್ಟದ ಮಧ್ಯೆ ಬಜೆಟ್ ಮಂಡನೆ ಅನಿವಾರ್ಯ
ಬೆಂಗಳೂರು : 2023ರ ರಾಜ್ಯ ಬಜೆಟ್ ಮಂಡನೆಗೆ ತಯಾರಿ ಆರಂಭವಾಗಿದೆ.. ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದು , 2023ರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನಪ್ರಿಯ ಘೋಷಣೆಯೊಂದಿಗೆ ಬಜೆಟ್ ಮಂಡಿಸುವ ಅನಿವಾರ್ಯತೆ ಸಿಎಂ ಅವರದ್ದು. ಆದಾಯ ಸಂಗ್ರಹ ಸೊರಗಿರುವ ಕಾರಣ ಬಜೆಟ್ಗೆ ಹಣ ಹೊಂದಿಸುವುದು ಕಷ್ಟಕರವಾಗಿದೆ. ಆರ್ಥಿಕ ಸಂಕಷ್ಟದ ಮಧ್ಯೆ ಜನರಿಗೆ ಹೊರೆಯಾಗದ ಬಜೆಟ್ ಮಂಡಿಸುವುದು ಸಿಎಂ ಬೊಮ್ಮಾಯಿಗೆ ಅನಿವಾರ್ಯವಾಗಿದೆ. ಕೋವಿಡ್ ಮೂರನೇ ಅಲೆಯ ಹಿನ್ನೆಲೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಹೇರಿದ್ದ ಕಾರಣ ಆದಾಯ ಸಂಗ್ರಹದಲ್ಲಿ ಮತ್ತೆ ಹಿನ್ನಡೆಯಾಗಿದೆ.
ನೀರು ಹಂಚಿಕೆ ವಿಚಾರದಲ್ಲಿ ಸಮಸ್ಯೆಯಾದರೆ ನಾವು ಒಪ್ಪುವುದಿಲ್ಲ….
Bengaluru: ನೀರು ಹಂಚಿಕೆ ವಿಚಾರದಲ್ಲಿ ಸಮಸ್ಯೆಯಾದರೆ ನಾವು ಅನುಮತಿ ಕೊಡುವುದಿಲ್ಲ: ಆರ್ ಅಶೋಕ್
ಬೆಂಗಳೂರು : ನದಿ ಜೋಡಣೆ ವಿಚಾರದಲ್ಲಿ ನಮಗೆ ಅನ್ಯಾಯವಾದರೆ ನಾವು ಒಪ್ಪುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ನಿನ್ನೆ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಬಜೆಟ್ ನಲ್ಲಿ ಕಾವೇರಿ ಮತ್ತು ಪೆನ್ನಾ ನದಿ ಜೋಡಣೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಆದರೆ ಇದಕ್ಕೆ ರಾಜ್ಯ ಸರ್ಕಾರದ ಅನುಮತಿ ಬೇಕೆಂದು ಹೇಳಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಆರ್ ಅಶೋಕ ನೀರು ಹಂಚಿಕೆ ವಿಚಾರದಲ್ಲಿ ಸಮಸ್ಯೆಯಾದರೆ ನಾವು ಅನುಮತಿ ಕೊಡುವುದಿಲ್ಲ. ನಮ್ಮ ರಾಜ್ಯದ ನೀರಿಗೆ ತೊಂದರೆ ಆಗಬಾರದು. ನಮಗೆ ಅನ್ಯಾಯ ಆಗುವ ರೀತಿ ನಾವು ಒಪ್ಪಲ್ಲ ಎಂದು ಸ್ಪಷ್ಟನೆ ನೀಡಿದರು.
ಜೀವ ಉಳಿಸಿದ ಟ್ರಾಫಿಕ್ ಪೊಲೀಸ್ ಗೊಂದು ಸಲಾಮ್…
Bengaluru: ರೋಗಿಯ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್
ಬೆಂಗಳೂರು : ಟ್ರಾಪಿಕ್ ಪೊಲೀಸ್ ಅವರ ಸಮಯ ಪ್ರಜ್ಞೆಯಿಂದ ವ್ಯಕ್ತಿಯ ಪ್ರಾಣ ಉಳಿದರವ ಘಟನೆ ಬೆಂಗಳೂರು ವಿಧಾನಸೌಧದ ಸಿಐಡಿ ಕಚೇರಿ ಬಳಿ ನಡೆದಿದೆ. ವ್ಯಕ್ತಿಯೊಬ್ಬರನ್ನು ಆಂಬುಲೆನ್ಸ್ ಮೂಲಕ ಗ್ಲೋಬಲ್ ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ವಿಧಾನಸೌಧದ ಸಿಐಡಿ ಕಚೇರಿ ಬಳಿ ಟಯರ್ ಪಂಕ್ಚರ್ ಆಗಿತ್ತು. ರೋಗಿಯ ಪತ್ನಿ ಹಾಗೂ ಮಗಳು ಸಹಾಯಕ್ಕಾಗಿ ಅಂಗಲಾಚಿದರೂ ಯಾರೂ ನೆರವಿಗೆ ಧಾವಿಸಲಿಲ್ಲ. ಬೇರೆ ಆಂಬುಲೆನ್ಸ್ ಗಳಿಗೆ ಕರೆಮಾಡಿದರೂ ಪ್ರಯೋಜನಾವಗಲಿಲ್ಲ. ಆಗ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಕಾಶಪ್ಪ ಕಲ್ಲೂರು ಪಂಕ್ಚರ್ ಆಗಿದ್ದ ಚಕ್ರವನ್ನು ಅವರೇ ಬದಲಿಸಿ ಆಂಬುಲೆನ್ಸ್ ಹೊರಡಲು ನೆರವಾಗಿದ್ದಾರೆ. ಇದರಿಂದ ರೋಗಿಯ ಜೀವ ಉಳಿದಿದೆ.
ವಿ.ಸೋಮಣ್ಣ ಅವರಿಗೆ ಕೊರೊನಾ ಪಾಸಿಟಿವ್…
Bengaluru: ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಕೊರೊನಾ ಪಾಸಿಟಿವ್
ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್- 19 ಸೋಂಕು ದೃಢಪಟ್ಟಿದೆ. ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದು ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಮೂಲಕ ಸುರಕ್ಷತೆಯಿಂದಿರಿ ಎಂದು ಹೇಳಿದ್ದಾರೆ.
ಮಾಜಿ ಸಂಸದ ಎಚ್ ಬಿ ಪಾಟೀಲ ನಿಧನ
Bagalakote: ಮಾಜಿ ಸಂಸದ ಎಚ್ ಬಿ ಪಾಟೀಲ ನಿಧನ
ಬಾಗಲಕೋಟೆ: ಮಾಜಿ ಸಂಸದ ಎಚ್ ಬಿ ಪಾಟೀಲ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಬಾಕಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಸತ್ ಸದಸ್ಯರಾಗಿದ್ದ 80 ವರ್ಷದ ಹನುಮಂತ ಗೌಡ ಭೀಮನಗೌಡ ಪಾಟೀಲ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಇವರನ್ನು ಬಾಗಲಕೋಟೆಯ ಖಾಸಗಿ ಅಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.










