ಪ್ರಮುಖ ಹೈ ಫೈ ರಾಜಕೀಯ ಸುದ್ದಿಗಳು ..!
ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ..!
ಹೊಸ ಕೊರೊನಾ ವೈರಾಣು ಕಂಟಕ: ವಿದೇಶದಿಂದ ಬಂದವರಿಗೆ 7 ದಿನ ಕ್ವಾರಂಟೈನ್..!
ಬೆಂಗಳೂರು: ಕಳೆದ 14 ದಿನಗಳಲ್ಲಿ ಬೇರೆ ದೇಶಗಳಿಂದ ರಾಜ್ಯಕ್ಕೆ ಬಂದವರು ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು. ಇಂಗ್ಲೆಂಡ್‍ನಿಂದ ಬಂದವರು ಹಾಗೂ ಬೇರೆ ದೇಶಗಳಿಂದ ಬಂದವರಿಗೂ 7 ದಿನಗಳ ಕ್ವಾರಂಟೈನ್ ಗೆ ಒಳಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಯುನೈಟೆಡ್ ಕಿಂಗ್‍ಡಮ್‍ನಿಂದ ಬಂದವರನ್ನು 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಬೇಕೆಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಬಗೆಯ ಕೊರೊನಾ ವೈರಾಣು ಕಂಡುಬಂದಿದೆ. ಇದು ವೇಗವಾಗಿ ಹರಡುವ ಲಕ್ಷಣ ಹೊಂದಿದ್ದರೂ, ರೋಗದ ತೀವ್ರತೆ ಹೆಚ್ಚಿಸುವುದಿಲ್ಲ. ಆದರೂ ಅತ್ಯಂತ ಎಚ್ಚರಿಕೆ ವಹಿಸಬೇಕಿದೆ ಎಂದು ಸಚಿವರು ಹೇಳಿದರು.
ಸಿದ್ದರಾಮಯ್ಯ ಡಿಸಿಎಂ, ಸಿಎಂ ಆಗುವ ಮಟ್ಟಕ್ಕೆ ಬೆಳೆದಿದ್ದೇ ನನ್ನ ಶ್ರಮದಿಂದ: ಹುಲಿಯಾಗೆ ದಳಪತಿ ಡಿಚ್ಚಿ..!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೆಚ್.ಡಿ ಕುಮಾರಸ್ವಾಮಿ ನಡುವಿನ ಜಟಾಪಟಿ ಮತ್ತೆ ತಾರಕ್ಕೇರಿದೆ. ಚಾಮುಂಡೇಶ್ವರಿ ಕ್ಷೇತ್ರದ ನನ್ನ ಸೋಲಿಗೆ ಬಿಜೆಪಿ ಜತೆ ಜೆಡಿಎಸ್ ಒಳ ಒಪ್ಪಂದ ಕಾರಣ ಎಂದು ಬಾಂಬ್ ಸಿಡಿಸಿದ್ದ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಂದು ಪ್ರಹಾರ ನಡೆಸಿದ್ದಾರೆ.
ಸಿದ್ದರಾಮಯ್ಯ ಎಲ್ಲಿದ್ದರು ಅಂತಾ ಗೊತ್ತಾ..ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಮಟ್ಟಕ್ಕೆ ಬೆಳೆಯಲು ನನ್ನ ಶ್ರಮವಿದೆ ಎಂದು ಹೇಳುವ ಮೂಲಕ ಭರ್ಜರಿ ಡಿಚ್ಚಿ ಕೊಟ್ಟಿದ್ದಾರೆ.
ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, 2004ರಲ್ಲಿ ಸಿದ್ದರಾಮಯ್ಯ ಡಿಸಿಎಂ ಆಗಲು ನನ್ನ ಪಾಲು ಇದೆ. ಆದರೆ, ನಾನು ಸಿಎಂ ಆಗಲು ನಿಮ್ಮ ಪಾಲು ಇಲ್ಲ ಎಂದು ಹೇಳುತ್ತಿದ್ದೇನೆ. ಸಿದ್ದರಾಮಯ್ಯ ಡಿಸಿಎಂ ಆಗಲು ಆರ್ಥಿಕ ಶಕ್ತಿ ಕೊಟ್ಟವನು ನಾನು. ಆದರೆ ಸಿದ್ದರಾಮಯ್ಯ ಅವರಿಂದ ನನಗೆ ಯಾವ ಲಾಭ ಆಗಿಲ್ಲ. ಆದರೆ, ಸಿದ್ದರಾಮಯ್ಯ ಪದೇ ಪದೆ ಒಳಒಪ್ಪಂದ, ಜೆಡಿಎಸ್ ಬಿಜೆಪಿಯ ಬಿ ಟೀಂ ಎನ್ನುವ ಮೂಲಕ ಕ್ಷುಲ್ಲಕ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಹೇಳಿಕೆ ನೀಡಿ ಗೌರವ ಕಳೆದುಕೊಳ್ಳಬೇಡಿ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ರೈತರ ಬೆಳೆವಿಮೆ, ನಷ್ಟ ಪರಿಹಾರ ಇತ್ಯರ್ಥಕ್ಕೆ ಬಿ.ಸಿ ಪಾಟೀಲ್, ಜೋಶಿ ಚರ್ಚೆ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಬಾಕಿ ಉಳಿದಿರುವ ನಷ್ಟ ಪರಿಹಾರ ಇತ್ಯರ್ಥ ಕುರಿತು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಸಂಸದ ಪ್ರಹ್ಲಾದ್ ಜೋಶಿ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದು, ಬೆಳೆವಿಮೆ ಕಂಪನಿಗಳ ಜೊತೆ ಕೃಷಿ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿರಬೇಕು. ಕಂಪನಿಗಳು ಹಾಗೂ ಕೃಷಿ ಇಲಾಖೆ ನಡುವೆ ಸಹಕಾರದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೈತರ ಖಾತೆ, ಬೆಳೆ ಸಮೀಕ್ಷೆ ಸೇರಿದಂತೆ ಯೋಜನೆಯಡಿಯಲ್ಲಿನ ತಾಂತ್ರಿಕ ವಿಚಾರದಲ್ಲಿ ಕಂಡುಬರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸಭೆಯಲ್ಲಿ ಚರ್ಚಿಸಲಾಯಿತು.
ಬಿಜೆಪಿ – ಜೆಡಿಎಸ್ ವಿಲೀನ ಪ್ರಶ್ನೆಯೆ ಇಲ್ಲ: ಸಿಎಂ ಯಡಿಯೂರಪ್ಪ
ಇತ್ತೀಚೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಗೆ ಬೆಂಬಲ ಸೂಚಿಸುತ್ತಿರುವ ಹಿನ್ನೆಲೆ ಬಿಜೆಪಿ-ಜೆಡಿಎಸ್ ವಿಲೀನವಾಗುತ್ತಾ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತಾರಕಕ್ಕೇರಿವೆ. ಆದ್ರೆ ಇದಕ್ಕೆ ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರ ಎಳೆದಿದ್ದಾರೆ.
ಹೌದು ಜೆಡಿಎಸ್ – ಬಿಜೆಪಿ ವಿಲೀನ ಪ್ರಶ್ನೆಯೇ ಇಲ್ಲ. ಇದೊಂದು ಸುಳ್ಳು ಸುದ್ದಿ ಎಂದು ಹೇಳುವ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪಅವರು ಎಲ್ಲಾ ಗೊಂದಲಗಳಿಗೆ ಸ್ಪಷ್ಟವಾಗಿ ಉತ್ತರಿಸಿದ್ದಾರೆ.
ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನ ಕ್ಲಿಕ್ ಮಾಡಿ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








