ಹೆಚ್ಚುವರಿ ಕಾವೇರಿ ನೀರಿನ ಮೇಲೆ ತಮಿಳುನಾಡು ಕಣ್ಣು : ಸಿಎಂ ಹೇಳಿದ್ದೇನು..?
ಹೆಚ್ಚುವರಿ ಕಾವೇರಿ ನೀರಿನ ಮೇಲೆ ತಮಿಳುನಾಡು ಕಣ್ಣು : ಸಿಎಂ ಹೇಳಿದ್ದೇನು..?
ಬೆಂಗಳೂರು : ಹೆಚ್ಚುವರಿ ಕಾವೇರಿ ನೀರಿನ ಮೇಲೆ ತಮಿಳುನಾಡು ಕಣ್ಣಿಟ್ಟಿದ್ದು, ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ `ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಇಲ್ಲ. ಅವರು ಹೇಳಿಕೆ ಕೊಡೋದ್ರಿಂದ ಯಾವುದೇ ಉಪಯೋಗ ಇಲ್ಲ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ನೀರು ಬಿಡುಗಡೆಗೆ ಅವಕಾಶ ಇಲ್ಲ. ಅವರು ಹೇಳಿಕೆ ಕೊಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಯಾವ ಕಾರಣಕ್ಕೂ ಮತ್ತೊಮ್ಮೆ ತಗೊಳ್ಳೋದು, ಕೊಡೋದಕ್ಕೆ ಅವಕಾಶ ಇಲ್ಲ. ಈ ಸಂಬಂಧ ಬಿಗಿ ಕ್ರಮವನ್ನು ಕೈಗೊಳ್ತೇವೆ ಎಂದು ಹೇಳಿದರು.
ರಾಜ್ಯ ಬಜೆಟ್ | ತೆರಿಗೆ ಇಲಾಖೆಗಳ ಜೊತೆ ಸಿಎಂ ಸಭೆ
ರಾಜ್ಯ ಬಜೆಟ್ | ತೆರಿಗೆ ಇಲಾಖೆಗಳ ಜೊತೆ ಸಿಎಂ ಸಭೆ
ಬೆಂಗಳೂರು : ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ ಇಂದು ತೆರಿಗೆ ಸಂಗ್ರಹಿಸುವ ಇಲಾಖೆಗಳ ಜೊತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ, ಸಾರಿಗೆ, ನೊಂದಣಿ ಮತ್ತು ಮುದ್ರಾಂಕ ಇಲಾಖೆ, ಗಣಿ ಹಾಗೂ ಭೂ ವಿಜ್ಞಾನ ಇಲಾಖೆಗಳ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ಶಕ್ತಿ ಭವನದಲ್ಲಿ ಈ ಸಭೆಗಳು ನಡೆಯಲಿವೆ. ಸಭೆಯಲ್ಲಿ ಸಂಬಂಧಿಸಿದ ಇಲಾಖೆ ಗಳ ಸಚಿವರು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಬಜೆಟ್ ರೂಪಿಸೋ ಸಂಬಂಧ ಇಲಾಖೆಗಳು ಸಂಗ್ರಹಿಸಿರುವ ತೆರಿಗೆ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ನಡೆಸಲಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಇವತ್ತು ಎಲ್ಲ ಇಲಾಖೆಗಳ ಸಭೆ ಮುಗಿಯುತ್ತೆ. ನಾಳೆ ಬಜೆಟ್ ಸಿದ್ಧತಾ ಸಭೆ ನಡೆಸ್ತೇವೆ. ಬೇರೆ ಬೇರೆ ಪ್ರಮುಖರ ಜೊತೆ ನಾಳೆ ಸಂಜೆವರೆಗೂ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ರೈಲ್ವೆ ಇಲಾಖೆಯಿಂದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಲಿಫ್ಟ್ ಹಸ್ತಾಂತರ
ರೈಲ್ವೆ ಇಲಾಖೆಯಿಂದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಲಿಫ್ಟ್ ಹಸ್ತಾಂತರ
ಮೈಸೂರು : ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸುವ ಲಿಫ್ಟ್ ಅನ್ನು ರೈಲ್ವೆ ಇಲಾಖೆಯಿಂದ ದೇವಸ್ಥಾನಕ್ಕೆ ಹಸ್ತಾಂತರಿಸಲಾಗಿದೆ. ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸುವ ಲಿಫ್ಟ್ ಅನ್ನು ರೈಲ್ವೆ ಇಲಾಖೆ ದೇವಸ್ಥಾನಕ್ಕೆ ಹಸ್ತಾಂತರಿಸುವ ಕಾರ್ಯಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ ಮಾತನಾಡಿ, ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸಲು ಲಿಫ್ಟ್ ಅವಶ್ಯಕತೆ ತುಂಬಾ ಇದೆ. ಬಹಳ ವರ್ಷಗಳಿಂದ ಶಿಥಿಲಾವಸ್ಥೆಯಿಂದಿತ್ತು. ಹೀಗಾಗಿ ಇದರ ದುರಸ್ತಿ ಇಲ್ಲವೇ ಹೊಸ ಲಿಫ್ಟ್ ಬೇಕೆಂದು ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ದೀಕ್ಷಿತ್ ಅವರು ಮನವಿ ಕೊಡುತ್ತಲೇ ಬಂದಿದ್ದಾರೆ.
ಹೆಸರೂರಲ್ಲಿರುವ ಶುದ್ಧ ನೀರಿನ ಘಟಕಗಳು ಹೆಸರಿಗೆ ಮಾತ್ರ
ಹೆಸರೂರಲ್ಲಿರುವ ಶುದ್ಧ ನೀರಿನ ಘಟಕಗಳು ಹೆಸರಿಗೆ ಮಾತ್ರ
ಕೊಪ್ಪಳ : ಜನರಿಗೆ ಅನುಕೂಲವಾಗಲಿ ಅನ್ನೋ ಉದ್ದೇಶದಿಂದ ರಾಜ್ಯದ ಹಲವು ಗ್ರಾಮಗಳಲ್ಲಿ ಸರ್ಕಾರದ ವತಿಯಿಂದ ಶುದ್ಧ ನೀರಿನ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಇದರಿಂದ ಸಾಕಷ್ಟು ಮಂದಿ ಅನುಕೂಲವಾಗಿದೆ. ಇದೊಂದು ಜನಪರ ಕಾರ್ಯಕ್ರಮವಾಗಿದ್ದು, ಪ್ರತಿ ಗ್ರಾಮದಲ್ಲೂ ಶುದ್ಧ ನೀರಿನ ಘಟಕ ಸ್ಥಾಪನೆಯ ಅವಶ್ಯಕತೆ ಇದೆ. ಆದ್ರೆ ಕೆಲವರ ನಿರ್ಲಕ್ಷ್ಯದಿಂದಾಗಿ ಸಾಕಷ್ಟು ಕಡೆ ಶುದ್ಧ ನೀರಿನ ಘಟಕಗಳು ಅನಾಥವಾಗಿವೆ. ಅದಕ್ಕೆ ಉದಾಹರಣೆ ಎಂಬಂತೆ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಸರೂರು ಗ್ರಾಮದಲ್ಲಿ ಅಳವಡಿಸಿರುವ ಎರಡು ಶುದ್ದ ನೀರಿನ ಘಟಕಗಳು ಹೆಸರಿಗೆ ಮಾತ್ರ ಇದ್ದು ಅಪ್ರಯೋಜಕವಾಗಿದೆ. ಹೌದು..! ಹೆಸರೂರು ಗ್ರಾಮದ ಜನರಿಗಾಗಿ ಶಾಲೆಯ ಬಳಿ ಹಾಗೂ ಜನತಾ ಕಾಲೋನಿಯಲ್ಲಿ ಪ್ರತ್ಯೇಕ ಶುದ್ದ ನೀರಿನ ಘಟಕ ಅಳವಡಿಸಲಾಗಿದೆ. ಜನತಾ ಕಾಲೋನಿಯ ಬಳಿ ಇರುವ ಶುದ್ದ ನೀರಿನ ಘಟಕ ಬಂದ್ ಆಗಿ ವರ್ಷವಾಗಿದ್ದು, ಮರು ದುರಸ್ತಿ ಕೂಡ ಆಗಿಲ್ಲ. ಇನ್ನೊಂದು ಶಾಲೆಯ ಬಳಿ ಇರುವ ಘಟಕಕ್ಕೆ ಬರೀ ಕ್ಯಾಬಿನ್ ಅಳವಡಿಸಿದ್ದು ಯಂತ್ರಗಳ ಜೋಡಣೆ ಸಾಧ್ಯವಾಗಿಲ್ಲ. ಈ ಬಗ್ಗೆ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ರೂ ಯಾವುದೇ ಪ್ರಯೋಜನಾ ಆಗುತ್ತಿಲ್ಲ ಅನ್ನೋ ಗ್ರಾಮಸ್ಥರ ಆರೋಪವಾಗಿದೆ. ಇನ್ನೇನು ಬೇಸಿಗೆ ಸಮೀಪಿಸುತ್ತಿದೆ. ಈಗಲಾದ್ರೂ ಈ ಶುದ್ಧ ನೀರಿನ ಘಟಕಗಳನ್ನು ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.