ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆ ಭಾರೀ ಅವಾಂತರವನ್ನೇ ಸೃಷ್ಟಿಸಿದ್ದು ಬಾಲಕಿಯ ಜೀವ ಪಡೆದಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ಗೋಡೆ ಕುಸಿದು ಬಿದ್ದು ಬಾಲಕಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಆರು ವರ್ಷದ ಬಾಲಕಿ ಸೌಜನ್ಯ ಮೃತಪಟ್ಟಿದ್ದು, ಬಾಲಕಿ ತಂದೆ ಚಲ್ಮೇಶ, ತಾಯಿ ಲಕ್ಷ್ಮೀ, ಅಣ್ಣ ಯಶಸ್‍ಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪರಶುರಾಂಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.