ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ಇದೂವರೆಗೆ ಜಿಲ್ಲೆಯ 52 ಪ್ರದೇಶಗಳಲ್ಲಿ ಪ್ರವಾಹ ಮತ್ತು 14 ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದೆ. 591 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಇನ್ನು ಪ್ರವಾಹ ಭೂಕುಸಿತದಿಂದಾಗಿ 8 ಕಡೆ ರಸ್ತೆ ಸಂಚಾರ ಕಡಿತಗೊಂಡಿದೆ ಎಂದು ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.
ಸದ್ಯ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಹೆಚ್ಚಿದ್ದು, ಕೊಡಗಿನ ಅರಮೇರಿ ಕಳಂಚೇರಿ ಮಠವು ಜಲಾವೃತಗೊಂಡಿದೆ. ಲಿಂಗ ವೀರರಾಜೇಂದ್ರ ಪ್ರಸಾದ ಭವನ ಮುಳುಗಡೆಯಾಗಿದೆ. ಲಿಂಗ ವೀರರಾಜೇಂದ್ರ ಭವನದಲ್ಲಿದ್ದ ವಿವಿಧ ಎಲೆಕ್ಟ್ರಾನಿಕ್ಸ್ ವಸ್ತುಗಳು ನೀರಿನಲ್ಲಿ ಮುಳುಗಿ ನಷ್ಟ ಉಂಟಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡು ಮಠದ ಜನರು ಸಮಸ್ಯೆಯಲ್ಲಿದ್ದಾರೆ.








