ಅಥಣಿ : ಡ್ರಗ್ ಮಾಫಿಯಾ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿ, ಡ್ರಗ್ ಮಾಫಿಯಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮಗಳನ್ನು ಜರಗಿಸುತ್ತದೆ ಎಂದು ತಿಳಿಸಿದ್ದಾರೆ.
ಡ್ರಗ್ ಮಾಫಿಯಾ ವಿಚಾರವಾಗಿ ಅಥಣಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಈ ಮಾದಕ ವಸ್ತು ಮಾರಾಟದಲ್ಲಿ ಯಾರು, ಎಷ್ಟೇ ದೊಡ್ಡವರ ಪ್ರಭಾವವಿರಲಿ, ಅವರನ್ನು ಸರ್ಕಾರ ಬಿಡುವುದಿಲ್ಲ. ಬಿಡುವ ಪ್ರಶ್ನೆಯೇ ಇಲ್ಲ. ಕಾನೂನು ಪ್ರಕಾರ ಅವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು. ಸಮಾಜ ಘಾತುಕ ಶಕ್ತಿಯನ್ನು ಮಟ್ಟಹಾಕಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಇಂದ್ರಜಿತ್ ಲಂಕೇಶ್ ಬಗ್ಗೆ ಮಾತನಾಡಿದ ಅವರು, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಬಳಿ ಯಾವ ಮಾಹಿತಿಯಿದೆ ಅದನ್ನು ತನಿಖಾ ಅಧಿಕಾರಿಗಳಿಗೆ ತಿಳಿಸಲಿ. ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಶ್ರೀ ಅನ್ನಪೂರ್ಣೆಶ್ವರಿ ಜ್ಯೋತಿಷ್ಯ ಪೀಠಂ
ಶ್ರೀ ಮಹಾ ಕಾಲ ಭೈರವ
ದೈವಜ್ಞ ಪಂಡಿತ್ ಗಜೇಂದ್ರ ಅವಧಾನಿಗಳು
ವಿಳಾಸ – ಡಿವಿಜಿ ರೋಡ್, ಬಸವನಗುಡಿ ಬೆಂಗಳೂರು
ಸರ್ವ ಸಮಸ್ಯೆಗಳಿಗೆ ಗುರುಗಳನ್ನು ಒಮ್ಮೆ ಭೇಟಿ ಕೊಡಿ
ಸಂಪರ್ಕಿಸಿ – 9538175275








