ಕೊರೊನಾ ತಡೆಗೆ ಟಫ್ ರೂಲ್ಸ್ : ರಾಜ್ಯಾದ್ಯಂತ 144 ಸೆಕ್ಷನ್, ಬೆಂಗಳೂರು ಸ್ತಬ್ಧ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಕೈ ಮೀರಿ ಹೋಗಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 14 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.
ಅದರಲ್ಲೂ ಮುಖ್ಯವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.
ಈ ಹಿನ್ನೆಲೆ ಕಠಿಣ ನಿಯಮ ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ.
ಕೊರೊನಾ ಕಂಟ್ರೋಲ್ ಗೆ ಮೇ 15 ರವರೆಗೆ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವೇಶ ನಿಬರ್ಂಧಿಸಿ ಭಾರತೀಯ ಪುರಾತತ್ವ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ತಜ್ಞರ ಶಿಫಾರಸ್ಸು
ರಾಜ್ಯಾದ್ಯಂತ 144 ಸೆಕ್ಷನ್ ಜಾರಿ
ರಾಜ್ಯದಲ್ಲಿ ಚಿತ್ರಮಂದಿರಗಳನ್ನು ಮುಚ್ಚುವುದು
ಬಾರ್, ಪಬ್ ಬಂದ್ ಮಾಡಲು ಸಲಹೆ
ಶಾಲೆ-ಕಾಲೇಜುಗಳನ್ನು ಬಂದ್ ಮಾಡುವಂತೆ ಶಿಫಾರಸು
ರಾಜ್ಯದ ಎಲ್ಲ ಧಾರ್ಮಿಕ ಕೇಂದ್ರಗಳನ್ನು ಬಂದ್
ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕಫ್ರ್ಯೂ
ಬೆಂಗಳೂರಿನಲ್ಲಿ ಕನಿಷ್ಠ 10 ದಿನ ಲಾಕ್ ಡೌನ್ ಗೆ ಶಿಫಾರಸ್ಸು










