ಅರಬ್ಬಿ ಸಮುದ್ರದಲ್ಲಿ ಬಾರ್ಜ್ ಮುಳುಗಡೆ – ದುರಂತದಲ್ಲಿ ಸಾವಿನ ಸಂಖ್ಯೆ 51 ಕ್ಕೆ ಏರಿಕೆ
ಮುಂಬೈ ತೌಕ್ತೆ ಚಂಡಮಾರುತದಿಂದ ಅರಬ್ಬಿ ಸಮುದ್ರದಲ್ಲಿ ಬಾರ್ಜ್ ಮುಳುಗಿ ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ 51ಕ್ಕೆ ಏರಿದೆ. ಬಾರ್ಜ್‌ನಿಂದ ನಾಪತ್ತೆಯಾದ 24 ಮಂದಿ ಮತ್ತು ಆ್ಯಂಕರ್ ನಿರ್ವಹಣೆ ದೋಣಿಯಿಂದ ನಾಪತ್ತೆಯಾದ 11 ಮಂದಿಗಾಗಿ ಶೋಧ ಮುಂದುವರಿದಿದೆ.

ಕಳೆದ ಸೋಮವಾರ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮುಳುಗಡೆಯಾಗಿದ್ದ ಬಾರ್ಜ್‌ನಲ್ಲಿ ಒಟ್ಟು 261 ಜನರಿದ್ದರು. ಅವರಲ್ಲಿ 186 ಮಂದಿಯನ್ನು ರಕ್ಷಿಸಲಾಗಿದೆ. ಆ್ಯಂಕರ್ ನಿರ್ವಹಣೆ ದೋಣಿಯಲ್ಲಿದ್ದ 13 ಮಂದಿಯಲ್ಲಿ ಇಬ್ಬರನ್ನು ಮಾತ್ರ ರಕ್ಷಿಸಲಾಗಿದೆ. ಉಳಿದ 11 ಮಂದಿಗಾಗಿ ಶೋಧ ನಡೆದಿದೆ.
ಮತ್ತೊಂದೆಡೆ ಮುಂಬೈ ಪೊಲೀಸರು ಈ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡಿದ್ದರೂ ಈ ಬಾರ್ಜ್ ಪ್ರಕ್ಷುಬ್ಧ ಪ್ರದೇಶದಲ್ಲಿ ಉಳಿದದ್ದೇಕೆ ಎಂಬ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ








