ಮುಂಬೈನಿಂದ ಗುಜರಾತ್ ತೀರದತ್ತ ತೌಕ್ತೇ ಚಂಡಮಾರುತ….
ಮುಂಬೈ: ಅರಬ್ಬೀ ಸುಮದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ದೇಶದ ಕರಾವಳಿ ಭಾಗಗಳಲ್ಲಿ ಚಂಡಮಾರುತದ ಎಫೆಕ್ಟ್ ತೀವ್ರವಾಗಿದೆ.. ಇದೀಗ ಮುಂಬೈನ ನೈರುತ್ಯ ದಿಕ್ಕಿನಿಂದ 160 ಕಿ.ಮೀ ದೂರದಲ್ಲಿ ತೌಕ್ತೆ ಚಂಡಮಾರುತವು ಅಬ್ಬರಿಸುತ್ತಿದ್ದು, ಬೆಳಗ್ಗೆ 11 ರಿಂದ ಮಧ್ಯಾಹ್ನ 2ರವರೆಗೂ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ.
ಇನ್ನೂ ರಾತ್ರಿ 8 ಮತ್ತು 9 ಗಂಟೆಗೆ ತೌಕ್ತೆ ಚಂಡ ಮಾರುತವು ಗುಜರಾತ್ ಕರಾವಳಿ ತೀರವನ್ನು ತಲುಪುವ ಸಾಧ್ಯತೆಯಿದೆ. ಭೂಕುಸಿತದ ಭೀತಿಯಿಂದ ಗುಜರಾತ್ ನ ಭಾವನಗರ್ ಜಿಲ್ಲೆಯ ಪೋರಬಂದರ್ ಮತ್ತು ಮಾಹುವಾ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ 25 ಸಾವಿರ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ತೌಕ್ತೆ ಚಂಡಮಾರುತದಿಂದ ಮುಂಬೈನ ಬಾಂದ್ರಾ-ವರ್ಲಿ ಸಮೀಪದಲ್ಲಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇಂದು ಮುಂಜಾನೆಯಿಂದ ತೌಕ್ತೆ ಚಂಡಮಾರುತ ತೀವ್ರಗೊಳ್ಳುತ್ತಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








