ತೌಕ್ತೇ ಚಂಡಮಾರುತದ ಅಬ್ಬರಕ್ಕೆ ತತ್ತರಿಸಿದ ಕರಾವಳಿ – 4 ಸಾವು
ಬೆಂಗಳೂರು : ಒಂದೆಡೆ ಕೊರೊನಾ ಆರ್ಭಟ… ಮತ್ತೊಂದೆಡೆ ಬ್ಲಾಕ್ ಫಂಗಸ್ ಕಾಟ… ಇದರ ಮಧ್ಯೆ ರಾಜ್ಯದಲ್ಲಿ ತೌಖ್ತೆ ಚಂಡಮಾರುತದ ಅಬ್ಬರಕ್ಕೆ ಕರಾವಳಿ ಪ್ರದೇಶದ ಜನರು ತತ್ತರಿಸಿಹೋಗಿದ್ದಾರೆ. ಕಳೆದ 24 ಗಂಟೆಗಳಿಂದ ಕರಾವಳಿಯ ಮೂರು ಜಿಲ್ಲೆಗಳು ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ.
ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಇಲ್ಲಿಯವರೆಗೆ 4 ಜನ ಸಾವನ್ನಪ್ಪಿದ್ದಾರೆ. ಈ ಚಂಡಮಾರುತ 73 ಗ್ರಾಮಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆಯು ತೌಖ್ತೆ ಚಂಡಮಾರುತ ಬೀಸುವ ಹಿನ್ನೆಲೆಯಲ್ಲಿ ಮಂಗಳೂರು, ಕಾರವಾರ, ಮಲ್ಪೆ, ಭಟ್ಕಳ, ಹೊನ್ನಾವರ ಹಾಗೂ ಕೇರಳದ ತಿರುವನಂತಪುರಗಳಿಗೆ ಮುನ್ನೆಚ್ಚರಿಕೆ ಘೋಷಿಸಿದೆ.
ಮಂಗಳೂರಿನ ಎಲ್ಲ ತಾಲೂಕುಗಳಲ್ಲಿ ಇಂದು ಕೂಡ ಮಳೆ ಮುಂದುವರಿದಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಮನೆಗಳು ಹಾನಿಯಾಗಿವೆ. ಅಲ್ಲದೇ, ತೆಂಗು ಸೇರಿದಂತೆ ತೋಟ – ಗದ್ದೆಗಳಲ್ಲಿ ನೀರು ನುಗ್ಗುತ್ತಿದೆ. ವಿದ್ಯುತ್ ಕಂಬಗಳು, ಮರಗಳು ಧರೆಗೆ ಉರುಳಿವೆ. ಜನರು ಕೈಯಲ್ಲಿ ಜೀವ ಹಿಡಿದು ಬುದುಕು ಸಾಗಿಸುತ್ತಿದ್ದಾರೆ. ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.