ಮೈಸೂರು : ಕೊರೊನಾ ಭೀತಿ ಹಿನ್ನೆಲೆ ಮೈಸೂರಿನ ಪ್ರವಾಸಿ Mysore Tourist ತಾಣಗಳಿಗೆ ಹೇರಲಾಗಿದ್ದ ನಿರ್ಬಂಧವನ್ನು ಇಂದಿನಿಂದ ತೆರವುಗೊಳಿಸಲಾಗಿದೆ.
ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆದೇಶದ ಮೇರೆಗೆ ಇಂದಿನಿಂದ ಪ್ರವಾಸಿ ತಾಣಗಳನ್ನು ಓಪನ್ ಮಾಡುವಂತೆ ಸಚಿವ ಎಸ್ ಟಿ ಸೋಮಶೇಖರ್ ಘೋಷಣೆ ಮಾಡಿದ್ದಾರೆ.
ಇದರೊಂದಿಗೆ ಚಾಮುಂಡಿ ಬೆಟ್ಟ, ಸಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ, ಅರಮನೆ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.
ಕೊರೊನಾ ಭೀತಿ ಹಿನ್ನೆಲೆ ಜಿಲ್ಲಾಡಳಿತ ನವೆಂಬರ್ 1 ರವೆಗೂ ನಿಬರ್ಂಧ ಹೇರಿತ್ತು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಇದನ್ನೂ ಓದಿ : ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರಿನ ಹಲವು ಸಂಘ ಸಂಸ್ಥೆಗಳು ಈ ಬಗ್ಗೆ ಸಿಎಂಗೆ ಮನವಿ ಮಾಡಿಕೊಂಡವು.
ಈ ಮನವಿಗೆ ಸಿಎಂ ಸ್ಪಂದಿಸಿದ್ದು, ಸದ್ಯ ಎಲ್ಲಾ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತವಾಗಲಿದೆ.
ಇನ್ನು ವಿಶ್ವವಿಖ್ಯಾತ ಮೈಸೂರು ದಸರಾಗೆ ಜಯದೇವ ಆಸ್ಪತ್ರೆ ನಿರ್ದೇಶಕ, ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಚಾಲನೆ ನೀಡಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ 410ನೇ ಮೈಸೂರು ದಸರಾ ಉದ್ಘಾಟನೆ ನೆರವೇರಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel