ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು ಮೋಹನ್ದಾಸ್ ನಿರ್ದೇಶನದ ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಬಿಡುಗಡೆಯ ಮುನ್ನವೇ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ.
ವರದಿಗಳ ಪ್ರಕಾರ, ಸಿನಿಮಾ ಬಿಡುಗಡೆಯಾಗಲು ಇನ್ನೂ ಎರಡು ದಿನಗಳು ಬಾಕಿ ಇರುವಂತೆಯೇ ದೇಶೀಯ ಬಾಕ್ಸ್ ಆಫೀಸ್ನಲ್ಲಿ ಮುಂಗಡ ಬುಕ್ಕಿಂಗ್ ಮೂಲಕ ₹35 ಕೋಟಿಗೂ ಹೆಚ್ಚು ಕಲೆಕ್ಷನ್ ಆಗಿದೆ.
ಕನ್ನಡ ಮತ್ತು ಇಂಗ್ಲಿಷ್ನಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಇತರ ಭಾರತೀಯ ಭಾಷೆಗಳಿಗೂ ಡಬ್ ಮಾಡಲಾಗಿದೆ. ಮುಂಗಡ ಬುಕ್ಕಿಂಗ್ನಲ್ಲಿ ಕನ್ನಡ ಹಾಗೂ ಹಿಂದಿ ಆವೃತ್ತಿಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎರಡೂ ಭಾಷೆಗಳಿಂದ ಸುಮಾರು ₹10 ಕೋಟಿ ಕಲೆಕ್ಷನ್ ಆಗಿದೆ ಎಂದು ವರದಿಯಾಗಿದೆ.
ಚಿತ್ರದ ಟ್ರೇಲರ್ ಮತ್ತು ಹಾಡುಗಳಿಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಯಶ್ ಅಭಿಮಾನಿಗಳಲ್ಲಿ ಸಿನಿಮಾ ಬಿಡುಗಡೆಯ ಕುರಿತು ಭಾರಿ ನಿರೀಕ್ಷೆ ಮೂಡಿದೆ.
.
ಬಿಡುಗಡೆಯ ಮುನ್ನವೇ ಮುಂಗಡ ಬುಕ್ಕಿಂಗ್ನಲ್ಲಿ ಇಷ್ಟು ದೊಡ್ಡ ಮೊತ್ತ ಸಂಗ್ರಹಿಸಿರುವುದು, ‘ಟಾಕ್ಸಿಕ್’ ಚಿತ್ರಕ್ಕೆ ಮೊದಲ ದಿನವೇ ಭರ್ಜರಿ ಓಪನಿಂಗ್ ಸಿಗುವ ನಿರೀಕ್ಷೆ ಹೆಚ್ಚಿಸಿದೆ.








