ಮೈಸೂರು : ಕೇಂದ್ರ ಸರ್ಕಾರದ ನಿರ್ಲಕ್ಷ್ಯಧೋರಣೆಯನ್ನು ವಿರೋಧಿ, ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಈ ವೇಳೆ ಕಾರ್ಮಿಕ ಸಂಘಟನೆಯ ಮುಖಂಡರು ಮಾತನಾಡಿ, ಕೊರೊನಾ ಹಿನ್ನಲೆ ಸರ್ಕಾರ ಲಾಕ್ ಡೌನ್ ಮಾಡಿತ್ತು. ಈ ಲಾಕ್ ಡೌನ್ ಪರಿಣಾಮ ಕಾರ್ಮಿಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಲಾಕ್ ಡೌನ್ ಅವಧಿಯಲ್ಲಿಯೂ ವೇತನ ನೀಡಬೇಕೆಂದು ತಿಳಿಸಿದರೂ ಸಹ ಕಾರ್ಖಾನೆ ಮಾಲೀಕರು ಇದುವರೆಗೂ ವೇತನ ನೀಡಿಲ್ಲ. ಇನ್ನೂ ಕೆಲವು ಕಾರ್ಖಾನೆಗಳು ಮುಚ್ಚುತ್ತಿದ್ದು ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಆದ್ದರಿಂದ ಮೈಸೂರಿನ ಎಲ್ಲಾ ಕಾರ್ಖಾನೆ ಪ್ರಾರಂಭಿಸಬೇಕು. ಮಾಸಿಕ 7500 ಹಣ ವರ್ಗಾವಣೆ ಮಾಡಬೇಕು. ಕೆಲಸ ನಿರಾಕರಣೆ ಮಾಡಿರುವ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿದ್ಯುತ್ ತಿದ್ದುಪಡಿ ಮಸೂದೆ 2020 ಅನ್ನು ಕೈಬಿಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಇನ್ನು ಈ ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶೇಷಾದ್ರಿ, ಜಿ.ಜಯರಾಂ, ಚಂದ್ರಶೇಖರ್ ಮೇಟಿ, ಅನಿಲ್ ಕುಮಾರ್ ಸೇರಿದಂತೆ ಇತರೆ ಕಾರ್ಮಿಕರು ಭಾಗಿಯಾಗಿದ್ದರು








