ಪ್ರವಾಸಿಗರನ್ನು ಹೊತ್ತುಕೊಂಡು ಸಾಗುತ್ತಿದ್ದ ಬಸ್ ಉತ್ತರ ಇಟಲಿಯ ವೆನಿಸ್ ಹತ್ತಿರದ ಮೇಲ್ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ 21 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಟಲಿಯ ವೆನಿಸ್ ಹತ್ತಿರ ಈ ಘಟನೆ ನಡೆದಿದೆ. ಸೇತುವೆ ಮೇಲಿಂದ ಮೂವತ್ತು ಅಡಿ ಆಳಕ್ಕೆ ಬೀಳುವ ಸಂದರ್ಭದಲ್ಲಿ ವಿದ್ಯುತ್ ತಂತಿಗಳ ಮೇಲೆ ಬಿದ್ದ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಾವನ್ನಪ್ಪಿದವರನ್ನು ಉಕ್ರೇನಿಯನ್ ಪ್ರವಾಸಿಗರು ಎಂದು ಸ್ಥಳೀಯರು ಹೇಳಿದ್ದಾರೆ. ಪ್ರಯಾಣಿಕರಲ್ಲಿ ಜರ್ಮನ್ನರು ಹಾಗೂ ಉಕ್ರೇನಿಯನ್ನರು ಸೇರಿದ್ದಾರೆ ಎಂದು ಇಟಾಲಿಯನ್ ಸುದ್ದಿ ಸಂಸ್ಥೆ ಹೇಳಿದೆ.