ಮಂಗಳೂರು: ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ “ಇಂಗ್ಲಿಷ್” ತುಳು ಸಿನಿಮಾದ ಟ್ರೈಲರ್ ಇದೇ ಮಾರ್ಚ್ 6 ರಂದು ಬಿಡುಗಡೆಯಾಗಲಿದೆ. ತುಳು ಚಿತ್ರದಲ್ಲಿ ಪ್ರಥಮ ಬಾರಿಗೆ ನಟಿಸುವ ಮೂಲಕ ಕೋಸ್ಟಲ್ ವುಡ್‌ಗೆ ಎಂಟ್ರಿ ಕೊಟ್ಟಿರುವ ನಟ ಅನಂತ್ ನಾಗ್ ಅವರು ಟ್ರೈಲರ್ ರಿಲೀಸ್ ಮಾಡಲಿದ್ದಾರೆ. ಈ ಸಿನಿಮಾವು ಮಾರ್ಚ್ 20ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ತೆರೆಕಾಣಲಿದ್ದು, ಮಾರ್ಚ್ 27ರಂದು ಬೆಂಗಳೂರು ಹಾಗೂ ಏಪ್ರಿಲ್ 5ರಂದು ಪುಣೆ ಮತ್ತು ಮುಂಬೈನಲ್ಲಿ ಬಿಡುಗಡೆಯಾಗಲಿದೆ. ಚಿತ್ರಕ್ಕೆ ಕೆ. ಸೂರಜ್ ಶೆಟ್ಟಿ ಅವರ ನಿರ್ದೇಶನವಿದ್ದು, ಪೃಥ್ವಿ ಅಂಬರ್, ನವ್ಯ ಪೂಜಾರಿ, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ನಾಯಕ್, ದೀಪಕ್ ರೈ ಪಾಣಾಜೆ, ರವಿರಾಮ ಕುಂಜ ಮೊದಲಾದವರು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ
ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...








