ರೈಲ್ವೆ ಪ್ರಯಾಣಿಕರ ಗಮನಕ್ಕೆ – ರೈಲ್ವೆ ಪ್ರಯಾಣಕ್ಕೆ ಸಂಬಂಧಿಸಿದಂತೆ ಹಳೆ ನಿಯಮ ಬದಲಾವಣೆ ಸಾಧ್ಯತೆ
ನೀವು ಭಾರತೀಯ ರೈಲ್ವೆಯ ಮೂಲಕ ಪ್ರಯಾಣಿಸಲು ಯೋಜಿಸುತ್ತಿದ್ದರೆ, ಈ ಸುದ್ದಿ ನಿಮಗೆ ಬಹಳ ಮುಖ್ಯವಾಗಿದೆ. ಶೀಘ್ರದಲ್ಲೇ ರೈಲ್ವೆ ಕೊರೋನಾಗೆ ಸಂಬಂಧಿಸಿದ ಹಳೆಯ ನಿಯಮಗಳನ್ನು ಬದಲಾಯಿಸಿ ಹೊಸ ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆ ಇದೆ. ಮಾಧ್ಯಮ ವರದಿಗಳ ಪ್ರಕಾರ, ರೈಲಿನಲ್ಲಿ ಪ್ರಯಾಣಿಸಲು ನಿಮಗೆ ಆರ್‌ಟಿಪಿಸಿಆರ್‌ನ ನೆಗೆಟಿವ್ ವರದಿ ಅಗತ್ಯವಿಲ್ಲ. ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ, ಅನೇಕ ರಾಜ್ಯಗಳು ಆರ್‌ಟಿಪಿಸಿಆರ್ ವರದಿಯನ್ನು ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕಡ್ಡಾಯಗೊಳಿಸಿದೆ. ಆದರೆ ಈ ನಿಯಮದಿಂದಾಗಿ ಪ್ರಯಾಣಿಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಶೀಘ್ರದಲ್ಲೇ ರೈಲ್ವೆ ಈ ನಿಯಮವನ್ನು ಬದಲಾಯಿಸಿ ಹೊಸ ನಿಯಮವನ್ನು ತರುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿದೆ.

ರೈಲಿನಲ್ಲಿ ಪ್ರಯಾಣಿಸಲು ಈ ಪ್ರಮಾಣಪತ್ರವು ಅಗತ್ಯವಾಗಬಹುದು
ಆರ್‌ಟಿ-ಪಿಸಿಆರ್‌ನ ನೆಗೆಟಿವ್ ವರದಿಯ ಬದಲು, ರೈಲ್ವೆ ಪ್ರಯಾಣಿಕರಿಗೆ ಕೊರೋನಾ ವ್ಯಾಕ್ಸಿನೇಷನ್ ಪ್ರಮಾಣಪತ್ರ ಕಡ್ಡಾಯಗೊಳಿಸಬಹುದು ಎಂದು ಮಾಹಿತಿಗಳು ತಿಳಿಸಿದೆ
ವರದಿಯ ಪ್ರಕಾರ, ಒಬ್ಬ ವ್ಯಕ್ತಿಯು ಕೋವಿಡ್ -19 ಲಸಿಕೆ ಪಡೆದಿದ್ದರೆ ಮತ್ತು ಲಸಿಕೆ ಪ್ರಮಾಣಪತ್ರವನ್ನು ಹೊಂದಿದ್ದರೆ ಅಥವಾ ಆರೋಗ್ಯಾ ಸೇತು ಅಪ್ಲಿಕೇಶನ್‌ನಲ್ಲಿ ಲಸಿಕೆ ಪ್ರಮಾಣಪತ್ರವನ್ನು ಹೊಂದಿದ್ದರೆ, ಅವರು ಯಾವುದೇ ತೊಂದರೆಯಿಲ್ಲದೆ ರೈಲಿನಲ್ಲಿ ಪ್ರಯಾಣಿಸಲು ಅರ್ಹರಾಗಿರುತ್ತಾರೆ. ಈ ನಿಯಮ ಜಾರಿ ಮಾಡುವುದರಿಂದ, ಹೆಚ್ಚು ಹೆಚ್ಚು ಜನರು ವ್ಯಾಕ್ಸಿನೇಷನ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ನಂಬಲಾಗಿದೆ. ಆದರೆ, ಈ ನಿಯಮದ ಬಗ್ಗೆ ರೈಲ್ವೆಯಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರೈಲ್ವೆ ಅನೇಕ ನಿಯಮಗಳನ್ನು ಬದಲಾಯಿಸಿದೆ
ಪ್ರಸ್ತುತ, ಆನ್ಲೈನ್ ನಲ್ಲಿ ಟಿಕೆಟ್ ಕಾಯ್ದಿರಿಸುವ ಪ್ರಯಾಣಿಕರಿಗೆ ಮಾತ್ರ ರೈಲಿನಲ್ಲಿ ಪ್ರಯಾಣಿಸಬಹುದು. ಇದರೊಂದಿಗೆ ರೈಲುಗಳು ಮತ್ತು ನಿಲ್ದಾಣಗಳಲ್ಲಿ ಸಾಮಾಜಿಕ ದೂರ ಮತ್ತು ಮಾಸ್ಕ್ ಕಡ್ಡಾಯಗೊಳಿಸಿದೆ. ಜೊತೆಗೆ, ರೈಲಿನ ಎಸಿ ಬೋಗಿಯಲ್ಲಿ ಕಂಬಳಿ ಮತ್ತು ಅಡುಗೆ ಸೌಲಭ್ಯವನ್ನು ಒದಗಿಸಲಾಗುತ್ತಿಲ್ಲ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1401728819275481088?s=19
https://twitter.com/SaakshaTv/status/1402118336113221639?s=19
https://twitter.com/SaakshaTv/status/1401392801661792259?s=19
https://twitter.com/SaakshaTv/status/1400611335294132227?s=19
https://twitter.com/SaakshaTv/status/1400669844085821442?s=19
#Trainpassenger








