ಬೆಂಗಳೂರು: ನೂತನವಾಗಿ ವಿಧಾನಸಭೆ (Vidhan sabha) ಪ್ರವೇಶಿಸುವ ಶಾಸಕರಿಗೆ (MLA) ಅಗತ್ಯ ತರಬೇತಿ ನೀಡುವುದು ವಾಡಿಕೆಯಾಗಿದ್ದು, ಬೆಂಗಳೂರಿನ (Bengaluru) ನೆಲಮಂಗಲದ ಸಮೀಪ ಇರುವ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಜೂ. 26 ರಿಂದ 28ರ ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ನಡೆಸಲಾಗುತ್ತಿದೆ.
ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ (Siddaramaiah) ಉದ್ಘಾಟಿಸಲಿದ್ದಾರೆ. ಸಭಾಪತಿ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಭಾಗವಹಿಸಲಿದ್ದಾರೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್, ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಭಾಗಿಯಾಗಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ, ಜಮಾತೆ ಇಸ್ಲಾಮಿ ಹಿಂದ್‌ನ ಮಹಮದ್ ಕುಂ ಸೇರಿದಂತೆ ವಿವಿಧ ಧಾರ್ಮಿಕ ಗುರುಗಳು ಕೂಡ ಭಾಷಣ ಮಾಡಲಿದ್ದಾರೆ.
ಈ ಬಾರಿ ಮೊದಲ ಬಾರಿ ಆಯ್ಕೆಯಾಗಿರುವ ಸುಮಾರು 70 ಶಾಸಕರು ತರಬೇತಿ ಪಡೆಯಲಿದ್ದಾರೆ. ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನೂತನ ಶಾಸಕರ ಜೊತೆಗೆ ಸಂವಾದ ಏರ್ಪಡಿಸಲಾಗಿದೆ.
ಶಾಸಕರ ಹಕ್ಕುಗಳು ಮತ್ತು ಕರ್ತವ್ಯಗಳು, ಶಾಸನಗಳ ರಚನೆ ಮತ್ತು ಸದಸ್ಯರ ಭಾಗವಹಿಸುವಿಕೆ, ಶೂನ್ಯವೇಳೆ, ಪ್ರಶ್ನೋತ್ತರ, ಜನಮೆಚ್ಚಿಸುವ ಶಾಸಕನಾಗುವುದು ಹೇಗೆ, ವಿಧಾನಮಂಡಲದ ಸಮಿತಿಗಳು ಮತ್ತು ಸದಸ್ಯರ ಭಾಗವಹಿಸುವಿಕೆ ಸೇರಿದಂತೆ ವಿಧಾನಮಂಡಲದ ಕಾರ್ಯಕಲಾಪಗಳು ಮತ್ತು ಶಾಸಕರ ಜವಾಬ್ದಾರಿಗಳ ಕುರಿತು ಹಿರಿಯ ಸದಸ್ಯರು ತರಬೇತಿ ಶಿಬಿರದಲ್ಲಿ ಮಾತನಾಡಲಿದ್ದಾರೆ.





![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)

![technologies-aerospace-defense-manufacturing-unit-devanahalli]](https://saakshatv.com/wp-content/uploads/2026/10/areo-350x247.png)
