ಹೈದರಾಬಾದ್: ತರಬೇತಿ ವಿಮಾನವೊಂದು ಪತನವಾಗಿದ್ದು, ವಾಯಪಡೆಯ ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ.
ಈ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ತೂಪ್ರಾನ್ ನ ರಾವೆಲ್ಲಿ ಗ್ರಾಮದಲ್ಲಿ ನಡೆದಿದೆ. ಹೈದರಾಬಾದ್ ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (AFA) ವಾಡಿಕೆಯ ತರಬೇತಿಗಾಗಿ Pilatus PC 7 Mk-II ವಿಮಾನ ಟೇಕಾಫ್ ಆಗಿತ್ತು. ಈ ಸಂದರ್ಭದಲ್ಲಿ ಈ ಅಪಘಾತ ನಡೆದಿದೆ. ಪೈಲಟ್ ಇಬ್ಬರೂ ಸಾವನ್ನಪ್ಪಿದ್ದಾರೆ. ಆದರೆ, ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ.
ಏರೋಬ್ಯಾಟಿಕ್ಸ್, ಯುದ್ಧತಂತ್ರ ಮತ್ತು ರಾತ್ರಿ ಹಾರಾಟ ಸೇರಿದಂತೆ ಎಲ್ಲಾ ಮೂಲಭೂತ ತರಬೇತಿ ಕಾರ್ಯಗಳಿಗೆ ಈ ವಿಮಾನ ಬಳಸಲಾಗುತ್ತದೆ. ಸರಿಸುಮಾರು 1,330 ಕೆ.ಜಿ ತೂಕ ಇರುತ್ತದೆ ಎನ್ನಲಾಗಿದೆ. ಪೈಲಟ್‌ಗಳ ಕುಟುಂಬಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಾಂತ್ವನ ಹೇಳಿದ್ದಾರೆ.