ಬೆಂಗಳೂರು: ರಾಜ್ಯಸಭೆ ಚುನಾವಣೆ ಮುಗಿಯುತ್ತಿದ್ದಂತೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ವಿಚಾರ ಭುಗಿಲೆದ್ದಿದ್ದು, ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಪಾಕ್ ಪರ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ದೇಶ ದ್ರೋಹಿಗಳ ಮಟ್ಟ ಹಾಕಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.