ಮಂಗಳೂರು ನಗರ ಪೊಲೀಸ್ ಆಯುಕ್ತ ಹರ್ಷಾ ವರ್ಗಾವಣೆ
ಮಂಗಳೂರು, ಜೂನ್ 27: ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಡಾ. ಪಿ.ಎಸ್. ಹರ್ಷಾ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ನೂತನ ಪೊಲೀಸ್ ಆಯುಕ್ತರಾಗಿ ಕಾರ್ಕಳ ಎ.ಎನ್.ಎಫ್.ನಲ್ಲಿ ಐಜಿಪಿಯಾಗಿದ್ದ ವಿಕಾಸ್ ಕುಮಾರ್ ವಿಕಾಸ್ ಅವರನ್ನು ನೇಮಕಗೊಳಿಸಿ ಆದೇಶ ನೀಡಲಾಗಿದೆ.
ಕೊರೊನಾ ಸಂಕಷ್ಟದ ಸಂದರ್ಭದಲ್ಲೇ ಸರಕಾರ ಆಡಳಿತಾತ್ಮಕ ಕ್ಷೇತ್ರದಲ್ಲಿ ಸರ್ಜರಿ ನಡೆಸಿದ್ದು, ಬಿಹಾರ ಮೂಲದ ಐ.ಪಿ.ಎಸ್. ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಈ ಹಿಂದೆ ನಕ್ಸಲ್ ನಿಗ್ರಹ ಪಡೆಯ ಡಿಐಜಿಪಿಯಾಗಿ ಕಾರ್ಕಳದಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ತಕ್ಷಣದಿಂದಲೇ ಜಾರಿಗೆ ಬರುವಂತೆ ಸರಕಾದ ಮುಖ್ಯ ಕಾರ್ಯದರ್ಶಿ ನಾಗಪ್ಪ ಎಸ್. ಪಾಟೀಲ್ ಅವರು ಈ ಆದೇಶ ಹೊರಡಿಸಿದ್ದು, ಡಾ. ಪಿ.ಎಸ್. ಹರ್ಷಾ ಅವರನ್ನು ಬೆಂಗಳೂರು ವಾರ್ತಾ ಮತ್ತು ಪ್ರಚಾರ ಇಲಾಖೆಯ ಡಿಐಜಿ ಮತ್ತು ಕಮೀಷನರ್ ಆಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.