ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆ ವಿಚಾರವಾಗಿ ಮಾಜಿ ಸಚಿವ ಯು.ಟಿ ಖಾದರ್ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಖಾದರ್, “ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೊಲೀಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು. ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ”.
https://twitter.com/utkhader/status/1288138197260673025?s=20
“ಇಂಥಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರುರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೊನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ, ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ. ಉತ್ತರಿಸು ಸರ್ಕಾರ ನ್ಯಾಯ ಎಲ್ಲಿದೆ ಎಂದು ಪ್ರಶ್ನೆ ಮಾಡಿದ್ದಾರೆ.
https://twitter.com/utkhader/status/1288138234560524288?s=20








