ರಾಮನಗರ: ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ.
ರ ಹೆಚ್ಚಳ ಖಂಡಿಸಿ ರಾಮನಗರದಲ್ಲಿ (Ramanagara) ಪ್ರತಿಭಟನೆ ನಡೆಸಿದ್ದಾರೆ. ರಾಮನಗರ (KSRTC) ಬಸ್ ಹತ್ತಿದ ಅವರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪುರಷರಿಗೂ ಬಸ್ ಪ್ರಯಾಣ ಉಚಿತ ಮಾಡುವಂತೆ ಸರ್ಕಾರಕ್ಕೆvatal ಆಗ್ರಹಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಸರ್ಕಾರ ರಾಜ್ಯ ಜನರನ್ನು ಲೂಟಿ ಮಾಡುತ್ತಿದೆ. ಪುರುಷರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತಿದೆ. ಇದು ಸರಿಯಲ್ಲ. ಕೂಡಲೇ ಸರ್ಕಾರ ದರ ಏರಿಕೆಯನ್ನು ಕೈಬಿಡಬೇಕು. ಇಲ್ಲ ಪುರುಷರಿಗೂ ಉಚಿತ ಬಸ್ ಪಯಣ ಎಂದು ಬಜೆಟ್‌ನಲ್ಲಿ ಘೋಷಣೆ ಮಾಡುವಂತೆ ಒತ್ತಾಯಿಸಿದ್ದಾರೆ.








