ಕೊರೋನಾ ಮಹಾಮಾರಿ ಹೊಡೆತಕ್ಕೆ ರಾಜ್ಯ ರಸ್ತೆ ಸಾರಿಗೆ ಇಲಾಖೆಗೆ ಭಾರೀ ಹೊಡೆತ ಬಿದ್ದಿದೆ. ರಾಜ್ಯ ಸಾರಿಗೆ ಇಲಾಖೆಗೆ ಸು.700 ಕೋಟಿ ರೂಪಾಯಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಈ ಕುರಿತಾಗಿ ಮಾತನಾಡಿರುವ ಅವರು ಕೊರೋನಾ ವೈರಸ್ ಬಂದ ಮೇಲೆ ಸಾರಿಗೆ ಇಲಾಖೆಗೆ 700 ಕೋಟಿ ರೂಪಾಯಿಗಿಂತಲೂ ಹೆಚ್ಚು ನಷ್ಟ ಉಂಟಾಗಿದೆ. ಎಲ್ಲಾ ಇಲಾಖೆಗಿಂತ ಸಾರಿಗೆ ಇಲಾಖೆಗೆ ತುಂಬಾ ನಷ್ಟ ಉಂಟಾಗಿದೆ ಎಂದು ವಿವರಿಸಿದ್ದಾರೆ.