chikamagaluru ಚಿಕ್ಕಮಗಳೂರು : ಸಾರಿಗೆ ನೌಕರರ ಪ್ರತಿಭಟನೆ
ಚಿಕ್ಕಮಗಳೂರು : ಆರನೇ ವೇತನ ಆಯೋಗ ಶಿಫಾರಸು ಜಾರಿಗೊಳಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಇಂದಿಗೆ ಆರನೇ ದಿನಕ್ಕೆ ಕಾಲಿಟ್ಟಿದೆ.
ಆದರೂ ಸರ್ಕಾರ ಯಾವುದೇ ಭರವಸೆ ನೀಡದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಮುಷ್ಕರನಿರತ ಸಾರಿಗೆ ನೌಕರರು ತಟ್ಟೆ, ಲೋಟಗಳನ್ನು ಬಡಿದು ಆಕ್ರೋಶ ವ್ಯಕ್ತಪಡಿಸಿದರು.
ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನೂ ಕೂಗಿದರು. ವಿಶೇಷವೆಂದರೇ ಪ್ರತಿಭಟನೆಯಲ್ಲಿ ನೌಕರರ ಕುಟುಂಬದವರೂ ಭಾಗಿಯಾಗಿದ್ದರು.










