ಬೆಂಗಳೂರು : ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು, ಕೋವಿಡ್ ನಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ 30 ಲಕ್ಷ ಪರಿಹಾರ, ವೇತನ ಹೆಚ್ಚಳ ಹಾಗೂ ತಾರತಮ್ಯ ನಿವಾರಣೆ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದರು. ಇಂದು ಈ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ರಾತ್ರಿ ಮುಷ್ಕರವನ್ನು ಹಿಂಪಡೆಯುವುದಾಗಿ ತಿಳಿಸಿದ್ದ ಸಾರಿಗೆ ನೌಕರರು ಇಂದೂ ಕೂಡ ಮುಷ್ಕರವನ್ನು ಮುಂದುವರೆಸಿದ್ದಾರೆ.
ಆದರೆ ಕೆಲವೆಡೆ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ಆರಂಭವಾಗಿದೆ.
ಈ ಬಗ್ಗೆ ಮಾತನಾಡಿರುವ ಲಕ್ಷ್ಮಣ್ ಸವದಿ, ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್ ಬಗ್ಗೆ ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಸಿಕ್ಕಿದೆ. ಈಗಾಗಲೇ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದೆ ಎಂದು ತಿಳಿಸಿದರು.
ಇನ್ನು ನಿನ್ನೆ ಏನೆಲ್ಲಾ ಆಯಿತೆಂದು ಎಲ್ಲರಿಗೂ ಗೊತ್ತಿದೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡೋದು ಆರ್ಥಿಕ ಇಲಾಖೆ ಸಾಧ್ಯ ಇಲ್ಲವೆಂದು ಮಾಹಿತಿ ನೀಡಿದೆ. ಹೀಗಾಗಿ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಇದೇ ವೇಳೆ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಿಡಿಕಾರಿದ ಲಕ್ಷ್ಮಣ್ ಸವದಿ, ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆ ರಾಜಕೀಯಪ್ರೇರಿತ. ಆತನಿ ಗೂ ನಮಗೂ ಸಂಬಂಧವಿಲ್ಲ. ನಮ್ಮ ಕರೆಗೆ ಓಗೊಟ್ಟು ಸಿಬ್ಬಂದಿ ಇಂದು ಹಾಜರಾಗಿದ್ದಾರೆ ಎಂದರು.









