ತೆಲಂಗಾಣ ರಾಜ್ಯದಲ್ಲಿ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಹೀಗಾಗಿ ಜನರನ್ನು ಸೆಳೆಯುವುದಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಯುತ್ತಿದೆ. ಈಗ ಮತದಾರರಿಗೆ ಹಂಚಲು ತಂದಿದ್ದ ಮದ್ಯ ವಶಕ್ಕೆ ಪಡೆಯಲಾಗಿದೆ.
ಬೆಳಗಾವಿಯಲ್ಲಿ (Belagavi) ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಮತದಾರರಿಗೆ ಹಂಚಲು ತರಲಾಗಿದ್ದ ಬ್ರ್ಯಾಂಡೆಡ್ ಮದ್ಯ ಜಪ್ತಿ ಮಾಡಿದ್ದಾರೆ. ಬೆಳಗಾವಿಯಲ್ಲಿ ತೆಲಂಗಾಣ ಚುನಾವಣೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವಾ ಮದ್ಯ ಜಪ್ತಿ ಮಾಡಲಾಗಿದೆ. ಲಾರಿ ಸಮೇತ 44 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದ್ದು ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ರಟ್ಟಿನ ರದ್ದಿಯಲ್ಲಿ ಅಕ್ರಮ ಮದ್ಯ ಮುಚ್ಚಿಟ್ಟು ಸಾಗಿಸಲಾಗುತ್ತಿತ್ತು. 21 ವಿವಿಧ ದುಬಾರಿ ಬ್ರ್ಯಾಂಡ್ನ 250 ಬಾಕ್ಸ್ ಮದ್ಯ ವಶಕ್ಕೆ ಪಡೆಯಲಾಗಿದೆ. 44 ಲಕ್ಷ ರೂ. ಮೌಲ್ಯದ ಗೋವಾ ಮದ್ಯ, 20 ಲಕ್ಷ ರೂ. ಮೌಲ್ಯದ ಲಾರಿ ಸೇರಿದಂತೆ ಒಟ್ಟು 63 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.