ಚಿಕ್ಕಮಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕೆಎಸ್ಆರ್ಟಿಸಿ ವಿಭಾಗ ನಿಯಂತ್ರಕ ಬಸವರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಿಕ್ಕಮಗಳೂರು ಕಚೇರಿಯಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು, ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲೇ ಬಸ್ ಚಾಲಕನಿಂದ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ಬಸವರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲಂಚಕ್ಕೆ ಬೇಡಿಕೆ ಇಟ್ಟ ಕುರಿತು ಚಾಲಕ, ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿ ಬಸವರಾಜನನ್ನು ಬಂಧಿಸಿದ್ದಾರೆ.