ಕೋಲಾರ : ಸಾರಿಗೆ ಡಿಪೋ ನೌಕರಸ್ಥರೊಬ್ಬರು ತಮ್ಮ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀನಿವಾಸಪುರದ ಉಪ್ಪುಕುಂಟೆ ಗ್ರಾಮದಲ್ಲಿ ನಡೆದಿದೆ.
ಸೋಮಾಚಾರಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಶ್ರೀನಿವಾಸಪುರ (Srinivasapur) ಸಾರಿಗೆ ಸಂಸ್ಥೆಯ ಬಸ್ (Bus) ಡಿಪೋದಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸೋಮಾಚಾರಿ, ಪಾರ್ಶ್ವವಾಯುವಿಗೆ ತುತ್ತಾಗಿದ್ದರು. ನಂತರ ಅವರಿಗೆ ಕೆಲಸಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರು ಡಿಪೋದಲ್ಲಿಯೇ ಕೆಲಸಕ್ಕೆ ನಿಯೋಜನೆ ಮಾಡಿಕೊಂಡಿದ್ದರು.
ಆದರೆ, ಅವರಿಗೆ ಮಾಡಲು ಅಸಾಧ್ಯವಾಗದ ಕೆಲಸ ನೀಡುವ ಮೂಲಕ ಡಿಪೋ ಮ್ಯಾನೇಜರ್ ವೆಂಕಟೇಶ್ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೂಡ ಮೇಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಮೃತ ಕಂಡಕ್ಟರ್ ಪತ್ನಿ ಧನಲಕ್ಷ್ಮೀ ಆರೋಪಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.