ಗಣಪತಿ ವಿಸರ್ಜನೆ ವೇಳೆ ದುರಂತ : ಮೂವರು ನೀರುಪಾಲು
ಬೆಂಗಳೂರು : ಪ್ರತಿ ವರ್ಷದಂತೆ ಈ ಬಾರಿಯೂ ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತಗಳು ಸಂಭವಿಸಿವೆ.
ಗಣೇಶ ವಿಸರ್ಜನೆ ವೇಳೆ ಚಿತ್ರದುರ್ಗದಲ್ಲಿ ಓರ್ವ ಯುವಕ ನೀರುಪಾಲಾಗಿದ್ದರೇ ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಕೊನೆಯುಸಿರೆಳೆದಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕೊಂಡಾಪುರ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ 27 ವರ್ಷದ ಚರಣರಾಜ್ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಗೆ ಬಿದ್ದು ಮೃತಪಟ್ಟಿದ್ದಾನೆ.
ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹಳೆವೂರು ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಹರಿಚರಣ್ ರೆಡ್ಡಿ(13) ಮತ್ತು ಲಿಖಿತ್(14) ಮೃತಪಟ್ಟ ಮಕ್ಕಳು ಎಂದು ಗುರುತಿಸಲಾಗಿದೆ.